ನಾಲ್ಕುವಾರ ಭಾರಿ ಮಳೆ ಸಾಧ್ಯತೆ; ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಿಎಂ ಸೂಚನೆ

Ravi Talawar
ನಾಲ್ಕುವಾರ  ಭಾರಿ ಮಳೆ ಸಾಧ್ಯತೆ; ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಿಎಂ ಸೂಚನೆ
WhatsApp Group Join Now
Telegram Group Join Now

ಬೆಂಗಳೂರು : ಮುಂದಿನ ನಾಲ್ಕು ವಾರಗಳಲ್ಲಿ ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ರಾಜ್ಯದ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿ ಪರಿಶೀಲನೆ ಕುರಿತು ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ರಾಜ್ಯದಲ್ಲಿ ಜೂನ್‌ 1 ರಿಂದ ಆಗಸ್ಟ್‌ 15 ರ ವರೆಗೆ ವಾಡಿಕೆಗಿಂತ ಶೇ. 22 ರಷ್ಟು ಹೆಚ್ಚು ಮಳೆಯಾಗಿದ್ದು, ಚಾಮರಾಜನಗರ, ಮಂಡ್ಯ, ತುಮಕೂರಿನಲ್ಲಿ ಅತ್ಯಧಿಕ ಮಳೆಯಾಗಿದೆ. 13 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಈ ಬಾರಿ ಇಡೀ ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ರಾಜ್ಯಾದ್ಯಂತ 82 ಲಕ್ಷ ಹೆಕ್ಟೇರ್‌ ಗುರಿಗೆ ಎದುರಾಗಿ 7೦ ಲಕ್ಷ ಹೆಕ್ಟೇರ್‌ ಬಿತ್ತನೆ ಆಗಿದೆ. ಈ ಬಾರಿ ಗುರಿ ಮೀರಿ ಸಾಧನೆ ಆಗುವ ನಿರೀಕ್ಷೆ ಇದೆ ಎಂದರು.

ಮುಂಗಾರು ಪೂರ್ವ ಬಿತ್ತನೆ ಆಗಿರುವ ಉದ್ದು ಮತ್ತು ಹೆಸರು ಕಟಾವಿಗೆ ಬಂದಿದೆ. ಮಳೆಯಿಂದ 81,589 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಅಂತಿಮ ವರದಿ ಬಂದ ಕೂಡಲೇ ಪರಿಹಾರ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು.

WhatsApp Group Join Now
Telegram Group Join Now
Share This Article