ಬೆಂಗಳೂರು, ಮಾರ್ಚ್ 11: ಕೆಂಪು ಮೆಣಸಿನಕಾಯಿಗೆ (Red chili pepper) ತುರ್ತಾಗಿ ಬೆಲೆ ಕೊರತೆ ಪಾವತಿ ಯೋಜನೆ (PDP) ದರ ನಿಗದಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ.
ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕದಲ್ಲಿ ಹೆಚ್ಚಾಗಿ ಕೆಂಪು ಮೆಣಸಿನಕಾಯಿ ಬೆಳೆಗಾರರಿದ್ದಾರೆ. ಕೆಂಪು ಮೆಣಸಿನಕಾಯಿ ಬೆಳೆಗಾರರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಕೂಡಲೇ ಕೆಂಪು ಮೆಣಸಿನಕಾಯಿಗೆ ಪಿಡಿಪಿ ದರ ನಿಗದಿ ಮಾಡಿ. ಇದರಿಂದ ಕೆಂಪು ಮೆಣಸಿನಕಾಯಿ ಬೆಳೆಗಾರರಿಗೆ ಅನುಕೂಲವಾಗಲಿದೆ ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಕರ್ನಾಟಕದಲ್ಲಿ, ಗುಂಟೂರು ವಿಧದ ಕೆಂಪು ಮೆಣಸಿನಕಾಯಿ (ಮಳೆಯಾಶ್ರಿತ) ಬೆಳೆ ಬೆಳೆಯಲು ಕರ್ನಾಟಕ ಕೃಷಿ ದರ ಆಯೋಗದ ಕ್ವಿಂಟಲ್ಗೆ 12,675 ರೂ. ತಗಲುತ್ತೆ ಎಂದು ಅಂದಾಜಿಸಿದೆ. ಆದಾಗ್ಯೂ, ಸಿಂಧನೂರಿನಂತಹ ಪ್ರಮುಖ ಮಾರುಕಟ್ಟೆಗಳಲ್ಲಿ ರೈತರು ಕೆಂಪು ಮೆಣಸಿನಕಾಯಿಯನ್ನು ಕ್ವಿಂಟಲ್ಗೆ 28,300 ರೂ. ಕ್ಕಿಂತ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಇದು ಭಾರಿ ಆರ್ಥಿಕ ನಷ್ಟಕ್ಕೆ ಕಾರಣವಾಗಿದೆ.