ಬೆಂಗಳೂರು ಪಕ್ಷದ ಶಾಸಕರ ಮನವಿ ಮತ್ತು ಬೇಡಿಕೆಗಳನ್ನು ಆಲಿಸಿ ಉಸ್ತುವಾರಿ ಸಚಿವರ ಜತೆಗಿನ ಸಮನ್ವಯ ಬೆಸೆದು ವಿಶ್ವಾಸ ವೃದ್ಧಿ ಪ್ರಯತ್ನವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಧಾರವಾಡ ಜಿಲ್ಲೆಯ ಶಾಸಕರ ಸಭೆ ನಡೆಸಿದರು. ಕ್ಷೇತ್ರವಾರು ಬಿಡುಗಡೆಯಾಗಿರುವ ಅನುದಾನ, ಚುನಾವಣೆ ವೇಳೆ ಕ್ಷೇತ್ರದಲ್ಲಿ ಕೊಟ್ಟಿರುವ ಆಶ್ವಾಸನೆಗಳು ಹಾಗೂ ಬಜೆಟ್ ಕಾರ್ಯಕ್ರಮಗಳ ಅನುಷ್ಠಾನ ಸ್ಥಿತಿಗತಿ ಕುರಿತು ಶಾಸಕ ಸಹೋದ್ಯೋಗಿಗಳೊಂದಿಗೆ ಸಿಎಂ ಸಮಾಲೋಚನೆ ನಡೆಸಿದರು.
ವಿಧಾನಸೌಧದ ಸಿಎಂ ಕಚೇರಿಯಲ್ಲಿ ನಡೆದ ಜಿಲ್ಲಾವಾರು ಶಾಸಕರ ಸಭೆಯಲ್ಲಿ
ಧಾರವಾಡ ಜಿಲ್ಲೆಯ ಉಸ್ತುವಾರಿ ಸಚಿವ ಸಂತೋಷ ಲಾಡ್ ಮತ್ತು ನವಲಗುಂದ ಶಾಸಕ ಎನ್ ಎಚ್ ಕೋನರೆಡ್ಡಿಯವರು ಪಾಲ್ಗೊಂಡಿದ್ದರು