ಪ್ರಜ್ವಲ್ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದತಿ ಕೋರಿ ಸಿಎಂ ಸಿದ್ದರಾಮಯ್ಯ ಕೇಂದ್ರಕ್ಕೆ ಮತ್ತೊಮ್ಮೆ ಪತ್ರ

Ravi Talawar
ಪ್ರಜ್ವಲ್ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದತಿ ಕೋರಿ ಸಿಎಂ ಸಿದ್ದರಾಮಯ್ಯ ಕೇಂದ್ರಕ್ಕೆ ಮತ್ತೊಮ್ಮೆ  ಪತ್ರ
WhatsApp Group Join Now
Telegram Group Join Now

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್​ಪೋರ್ಟ್​ ರದ್ದು ಮಾಡಬೇಕು. ಈ ವಿಚಾರದಲ್ಲಿ ವಿದೇಶಾಂಗ ಸಚಿವಾಲಯ ಮಧ್ಯ ಪ್ರವೇಶಿಸಬೇಕು ಎಂದು ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.

ಬುಧವಾರ ಎರಡನೇ ಪತ್ರ ಬರೆದಿರುವ ಸಿಎಂ, ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ಅನ್ನು ರದ್ದುಗೊಳಿಸಬೇಕು. ಭಾರತಕ್ಕ ವಾಪಸ್ ಕರೆತರಲು ತ್ವರಿತ ಕ್ರಮವಹಿಸಬೇಕೆಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಪ್ರಜ್ವಲ್ ರೇವಣ್ಣ ಮೇಲೆ ಆರೋಪ, ಗಂಭೀರ ಘಟನೆಗಳ ಬಗ್ಗೆ ಗಮನ ಸೆಳೆಯಲು ನಾನು ಮತ್ತೊಮ್ಮೆ ನಿಮಗೆ ಬರೆಯುತ್ತೇನೆ. ಈ ಘಟನೆಗಳು ಕರ್ನಾಟಕ ರಾಜ್ಯದ ಜನರ ಆತ್ಮಸಾಕ್ಷಿಯನ್ನು ಬೆಚ್ಚಿ ಬೀಳಿಸಿದೆ. ಅಲ್ಲದೇ ರಾಷ್ಟ್ರವ್ಯಾಪಿ ಆತಂಕಕ್ಕೂ ಕಾರಣವಾಗಿವೆ. ಪ್ರಸ್ತುತ ಸಾರ್ವತ್ರಿಕ ಚುನಾವಣೆಯಲ್ಲಿ ಮರು ಚುನಾವಣೆಗೆ ಸ್ಪರ್ಧಿಸಿರುವ ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ, ಮಾಜಿ ಪ್ರಧಾನಿ ಮೊಮ್ಮಗ ಏಪ್ರಿಲ್ 27 ರಂದು ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ ಸಂಗತಿ.

2024 ರಲ್ಲಿ ಜರ್ಮನಿಗೆ ತನ್ನ ರಾಜತಾಂತ್ರಿಕ ಪಾಸ್‌ಪೋರ್ಟ್ ಹೊಂದಿರುವ ಆ1135500 ಅನ್ನು ಬಳಸಿಕೊಂಡು ದೇಶ ಬಿಟ್ಟು ಹೋಗಿದ್ದಾರೆ. ಅವರ ವಿರುದ್ಧ ಆರೋಪಗಳು ಬಂದಾಗ, ಹೇಯ ಕೃತ್ಯಗಳು ಹೊರಬಂದ ಬಳಿಕ ಮೊದಲ ಎಫ್‍ಐಆರ್ ದಾಖಲಾಗುವ ಕೆಲವೇ ಗಂಟೆಗಳ ಮೊದಲು ಪಲಾಯನ ಮಾಡಿದ್ದಾರೆ. ದೇಶದಿಂದ ಪಲಾಯನ ಮಾಡಲು ಮತ್ತು ಕ್ರಿಮಿನಲ್ ಮೊಕದ್ದಮೆಗಳಿಂದ ತಪ್ಪಿಸಿಕೊಳ್ಳಲು ತಮ್ಮ ರಾಜತಾಂತ್ರಿಕ ಸವಲತ್ತುಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ.

ಈ ನಡುವೆ ಮಹಿಳೆಯ ಅಪಹರಣ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರ ಕಾರು ಚಾಲಕ ಅಜಿತ್​ಗೆ ಎಸ್ಐಟಿ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.ಮಹಿಳೆ ಅಪಹಣ ಪ್ರಕರಣ ಸಂಬಂಧ ಎರಡು ಬಾರಿ ಸಮನ್ಸ್ ಜಾರಿ ಮಾಡಲಾಗಿದೆ. ಹೊಳೆನರಸೀಪುರದಲ್ಲಿರುವ ಚಾಲಕ ಅಜಿತ್ ನಿವಾಸಕ್ಕೆ ತೆರಳಿ ಸಮನ್ಸ್ ನೀಡಲಾಗಿದೆ. ಕಿಡ್ನಾಪ್ ಪ್ರಕರಣ ದಾಖಲಾದ ಬಳಿಕ ಅಜಿತ್ ತಲೆಮರೆಸಿಕೊಂಡಿದ್ದಾನೆ. ಸಂತ್ರಸ್ತೆಯನ್ನು ಕಾರಿನಲ್ಲಿ ಕರೆದೊಯ್ದಿದ್ದ ಆರೋಪ ಅವರ ಮೇಲಿದೆ.

WhatsApp Group Join Now
Telegram Group Join Now
Share This Article