ಬೆಂಗಳೂರು, ಜನವರಿ 25: ಸಾಲ ವಸೂಲಾತಿಗೆ ರೌಡಿಶೀಟರ್ಗಳು, ಗೂಂಡಾಗಳನ್ನು ಬಳಸಲೇಬಾರದು. ಸಾಲ ವಸೂಲಾತಿ ಜವಾಬ್ದಾರಿಯನ್ನು ಫೈನಾನ್ಸ್ಗಳು ಔಟ್ಸೋರ್ಸ್ ಕೊಡಬಾರದು. ಹಾಗೆ ಮಾಡಿದ್ದೇ ಆದರೆ ಅಂಥವರ ವಿರುದ್ಧ ಕೇಸು ದಾಖಲಿಸಿ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆಂದು ಸಿಎಂ ಸಿದ್ದರಾಮಯ್ಯ ಶನಿವಾರ ಖಡಕ್ ಸಂದೇಶ ರವಾನಿಸಿದ್ದಾರೆ. ಗೃಹ ಕಚೇರಿ ಕೃಷ್ಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಪರಮೇಶ್ವರ್ ಹಾಗೂ ಉನ್ನತ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಮೈಕ್ರೋಫೈನಾನ್ಸ್ ಅಸೋಸಿಯೇಷನ್ ಅಭಿಪ್ರಾಯ ಪಡೆದಿದ್ದೇನೆ. ಆರ್ಬಿಐ ಅಧಿಕಾರಿಗಳ ಅಭಿಪ್ರಾಯವನ್ನೂ ಕೇಳಿದ್ದೇನೆ. ಯಾರಿಗೂ ಸಾಲ ಕೊಡಬೇಡಿ ಎಂದು ನಾವು ಹೇಳುವುದಿಲ್ಲ. ಆದರೆ ವಸೂಲಿ ಮಾಡುವಾಗ ಕಿರುಕುಳ ಕೊಡಲೇಬಾರದು. ಆರ್ಬಿಐ ನಿಯಮದಂತೆ ನಡೆದುಕೊಳ್ಳಬೇಕೆಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.
ಮೈಕ್ರೋ ಫೈನಾನ್ಸ್ ಹಾವಳಿ: ಆರ್ಬಿಐ ನಿಯಮದಂತೆ ನಡೆದುಕೊಳ್ಳಬೇಕೆಂದು ಸಿಎಂ ಸಿದ್ದರಾಮಯ್ಯ ಸೂಚನೆ
ಸಾಲ ವಸೂಲಾತಿ ವೇಳೆ ಆರ್ಬಿಐ ನಿಯಮದಂತೆ ನಡೆದುಕೊಳ್ಳಬೇಕು. ಸಂಜೆ 5 ಗಂಟೆ ನಂತರ ಸಾಲ ವಸೂಲಾತಿಗೆ ಹೋಗಬಾರದು. ಮೈಕ್ರೋ ಫೈನಾನ್ಸ್, ಗಿರವಿ ಅಂಗಡಿಯವರು ಕಾನೂನು ಪಾಲಿಸಬೇಕು. ಕಾನೂನು ಉಲ್ಲಂಘಿಸುವವರ ವಿರುದ್ಧ ಮುಲಾಜಿಲ್ಲದೆ ಕ್ರಮಕೈಗೊಳ್ಳುತ್ತೇವೆ. ಇಂದು ನಡೆದ ಸಭೆಯಲ್ಲಿ ಎಚ್ಚರಿಕೆ ನೀಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.