ಸಿಎಂ ಸಿದ್ದರಾಮಯ್ಯ ವಿರುದ್ಧ 500 ಕೋಟಿ ರೂ. ಕಿಕ್‌ಬ್ಯಾಕ್ ಪಡೆದ ಆರೋಪ !

Ravi Talawar
ಸಿಎಂ ಸಿದ್ದರಾಮಯ್ಯ ವಿರುದ್ಧ 500 ಕೋಟಿ ರೂ. ಕಿಕ್‌ಬ್ಯಾಕ್ ಪಡೆದ ಆರೋಪ !
WhatsApp Group Join Now
Telegram Group Join Now

ಬೆಂಗಳೂರು, ಏಪ್ರಿಲ್ 9: ಮುಡಾ ಹಗರಣದಲ್ಲಿ ಇನ್ನೂ ಜಾರಿ ನಿರ್ದೇಶನಾಲಯದ ತೂಗುಗತ್ತಿಯಿಂದ ಪಾರಾಗದ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಇದೀಗ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಗಣಿ ಗುತ್ತಿಗೆ ನವೀಕರಣ ಹೆಸರಲ್ಲಿ 500 ಕೋಟಿ ರೂ. ಕಿಕ್‌ಬ್ಯಾಕ್ (Kickback) ಪಡೆದ ಆರೋಪ ಅವರ ವಿರುದ್ಧ ಕೇಳಿಬಂದಿದ್ದು, ಈ ವಿಚಾರವಾಗಿ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿ ಗೌಡ ರಾಜ್ಯಪಾಲ (Karnataka Governor) ಥಾವರ್​​ಚಂದ್ ಗೆಹ್ಲೋಟ್​​ ಅವರಿಗೆ ಮನವಿ ಮಾಡಿದ್ದಾರೆ.

ಏನಿದು ಸಿದ್ದರಾಮಯ್ಯ ವಿರುದ್ಧ ಹೊಸ ಆರೋಪ?

2015ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಸಿದ್ದರಾಮಯ್ಯ ಅವರಯ 8 ಗಣಿ ಗುತ್ತಿಗೆ ನವೀಕರಣ ಮಾಡಿದ್ದರು. ಹರಾಜು ಹಾಕುವ ಬದಲಿಗೆ ನವೀಕರಣ ಮಾಡಿದ್ದರು. ಗಣಿ ಹಗರಣದಲ್ಲಿ ತನಿಖೆ ಎದುರಿಸುತ್ತಿರುವ ಗಣಿ ಕಂಪೆನಿಗಳ ಲೈಸೆನ್ಸ್ ಕೂಡ ನವೀಕರಣ ಮಾಡಲಾಗಿತ್ತು. ಸಾಕಷ್ಟು ವರ್ಷಗಳಿಂದ ಬಾಕಿ ಇದ್ದ ಲೈಸೆನ್ಸ್ ನವೀಕರಣ ಮಾಡಲಾಗಿತ್ತು. ಹಾಗೆ ನವೀಕರಣ ಮಾಡಿಕೊಟ್ಟಿದ್ದಕ್ಕೆ ಕಿಕ್‌ಬ್ಯಾಕ್ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸುಮಾರು 500 ಕೋಟಿ ರೂ. ಕಿಕ್‌ಬ್ಯಾಕ್ ಪಡೆದಿದ್ದಾರೆ ಎಂದು ರಾಮಮೂರ್ತಿ ಗೌಡ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ನಿರ್ಧಾರದಿಂದ ಸರ್ಕಾರಕ್ಕೆ 5000 ಕೋಟಿ ನಷ್ಟ ಆಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಲು ಮನವಿ

ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ಸಿದ್ದರಾಮಯ್ಯ ಅವರನ್ನು ಪ್ರಾಸಿಕ್ಯೂಷನ್ ಒಳಪಡಿಸಲು ಅನುಮತಿ ನೀಡಿ ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ 1988ರ ಸೆಕ್ಷನ್ 7, 9, 11, 12 ಮತ್ತು 15 ಅಡಿ ಪ್ರಾಸಿಕ್ಯೂಚನ್​ಗೆ ಅನುಮತಿ ಕೊಡಿ ಎಂದು ಮನವಿ ಮಾಡಲಾಗಿದೆ.

WhatsApp Group Join Now
Telegram Group Join Now
Share This Article