‘ಒಂದು ರಾಷ್ಟ್ರ, ಒಂದು ಚುನಾವಣೆ’’ ಪ್ರಸ್ತಾವ ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ ಸಿದ್ದರಾಮಯ್ಯ

Ravi Talawar
‘ಒಂದು ರಾಷ್ಟ್ರ, ಒಂದು ಚುನಾವಣೆ’’ ಪ್ರಸ್ತಾವ ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ ಸಿದ್ದರಾಮಯ್ಯ
WhatsApp Group Join Now
Telegram Group Join Now

ಬೆಂಗಳೂರು: ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ‘ಒಂದು ರಾಷ್ಟ್ರ, ಒಂದು ಚುನಾವಣೆ’’ ಪ್ರಸ್ತಾವ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು. ಮಾತ್ರವಲ್ಲ ಅನುಷ್ಠಾನಗೊಳಿಸಲು ಕೂಡಾ ಅಸಾಧ್ಯವಾದುದು ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಇಂತಹದ್ದೊಂದು ಮಹತ್ವದ ಪ್ರಸ್ತಾವದ ಬಗ್ಗೆ ವಿರೋಧ ಪಕ್ಷಗಳ ಜೊತೆ ಸಮಾಲೋಚನೆಯನ್ನೂ ಮಾಡದೇ ತರಾತುರಿಯಲ್ಲಿ ಅನುಷ್ಠಾನಕ್ಕೆ ತರಲು ಹೊರಟಿರುವುದು ನರೇಂದ್ರ ಮೋದಿ ಸರ್ಕಾರದ ದುಷ್ಟ ಉದ್ದೇಶವನ್ನು ಅನಾವರಣಗೊಳಿಸಿದೆ. ಒಂದು ಸರ್ಕಾರದ ಆದ್ಯತೆಗಳು ಏನಿರಬೇಕೆಂಬ ಸಾಮಾನ್ಯ ಜ್ಞಾನವೂ ಕೇಂದ್ರ ಸರ್ಕಾರಕ್ಕಾಗಲಿ, ಪ್ರಧಾನಮಂತ್ರಿಯವರಿಗಾಗಲಿ ಇದ್ದ ಹಾಗೆ ಕಾಣುವುದಿಲ್ಲ ಎಂದು ಹೇಳಿದ್ದಾರೆ.

ಆಡಳಿತಾರೂಢ ಬಿಜೆಪಿ ಪಕ್ಷದ ಗುಪ್ತ ಅಜೆಂಡಾವನ್ನು ಒಳಗೊಂಡಿರುವ “ಒಂದು ದೇಶ, ಒಂದು ಚುನಾವಣೆ” ಪ್ರಸ್ತಾವವನ್ನು ಸಂಸತ್​ನ ಒಳಗೆ ಮತ್ತು ಹೊರಗೆ ನಮ್ಮ ಪಕ್ಷ ಎದುರಿಸಲಿದೆ. ದೇಶದ ಜನಾಭಿಪ್ರಾಯವೂ ‘‘ಒಂದು ದೇಶ, ಒಂದು ಚುನಾವಣೆ’’ ವ್ಯವಸ್ಥೆಗೆ ವಿರುದ್ಧವಾಗಿದೆ. ಒಂದು ದೇಶ ಒಂದು ಚುನಾವಣೆಯ ವ್ಯವಸ್ಥೆ ಸಂಪೂರ್ಣವಾಗಿ ಪ್ರಜಾಪ್ರಭುತ್ವ ವಿರೋಧಿಯಾಗಿದೆ ಎಂದು ಹೇಳಿದ್ದಾರೆ.

ಲೋಕಸಭೆ ಇಲ್ಲವೇ ವಿಧಾನಸಭೆಯಲ್ಲಿ ಆಡಳಿತಾರೂಢ ಪಕ್ಷ ವಿಶ್ವಾಸಮತ ಗಳಿಸಲು ಸೋತುಹೋಗುವ ಸಂದರ್ಭದಲ್ಲಿ ಎದುರಾಗುವ ಬಿಕ್ಕಟ್ಟಿಗೆ ಪ್ರಸ್ತಾವದಲ್ಲಿ ಪರಿಹಾರ ಇಲ್ಲ. ಇಂತಹ ಸಂದರ್ಭದಲ್ಲಿ ಮಧ್ಯಂತರ ಚುನಾವಣೆಯೊಂದೇ ಯೋಗ್ಯ ಪರಿಹಾರವಾಗಿದೆ. ಇದರ ಬದಲಿಗೆ ಸದನದಲ್ಲಿ ವಿಶ್ವಾಸ ಮತ ಗಳಿಸಲು ವಿಫಲವಾದ ಅಲ್ಪಸಂಖ್ಯಾತ ಪಕ್ಷ ಅಧಿಕಾರದಲ್ಲಿ ಮುಂದುವರಿಯಲು ಅವಕಾಶ ನೀಡಿದರೆ ಅದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಗೆಯುವ ದ್ರೋಹವಾಗುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.

WhatsApp Group Join Now
Telegram Group Join Now
Share This Article