ಕೇಂದ್ರ ಸರ್ಕಾರದ ಕೈಗೊಂಬೆ ರಾಜ್ಯಪಾಲರ ನೋಟಿಸ್​ಗೆ ಹೆದರಲ್ಲ: ಸಿಎಂ ಸಿದ್ದರಾಮಯ್ಯ

Ravi Talawar
ಕೇಂದ್ರ ಸರ್ಕಾರದ ಕೈಗೊಂಬೆ ರಾಜ್ಯಪಾಲರ ನೋಟಿಸ್​ಗೆ ಹೆದರಲ್ಲ: ಸಿಎಂ ಸಿದ್ದರಾಮಯ್ಯ
WhatsApp Group Join Now
Telegram Group Join Now

ಮೈಸೂರು, ಆಗಸ್ಟ್ 2: ಮುಡಾ ಹಗರಣ ಸಂಬಂಧ ರಾಜ್ಯಪಾಲರು ಶೋಕಾಸ್ ನೀಡಿರುವ ವಿಚಾರವಾಗಿ ಆಕ್ರೋಶ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, ಇದಕ್ಕೆಲ್ಲ ನಾನು ಹೆದರಲ್ಲ. ಇದನ್ನೆಲ್ಲ ಎದುರಿಸಲು ಸಿದ್ಧರಾಗಿದ್ದೇವೆ‌. ತಪ್ಪು ಮಾಡಿದ್ದರೆ ತಾನೇ ಹೆದರುವುದು. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ ಎಂದು ವಾಗ್ದಾಳಿ ನಡೆಸಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯಪಾಲರು ಜೆಡಿಎಸ್, ಬಿಜೆಪಿ ಕೈಗೊಂಬೆಯಾಗಿ ವರ್ತಿಸಿದ್ದಾರೆ. 136 ಶಾಸಕರ ಬೆಂಬಲದಿಂದ ಮುಖ್ಯಮಂತ್ರಿ ಆಗಿರುವವನು ನಾನು ಎಂದರು.

ನನ್ನ ಪಾತ್ರ ಇಲ್ಲದಿದ್ದರೂ ಸರ್ಕಾರ ಅಸ್ಥಿರಗೊಳಿಸಲು ಯತ್ನಿಸಿದ್ದಾರೆ. ರಾಜ್ಯಪಾಲರಿಗೆ ಸಲಹೆ ನೀಡುವವರು ಯಾರು? ರಾಜಭವನ ಹಾಗೂ ರಾಜ್ಯಪಾಲರ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ರಾಜ್ಯಪಾಲರ ನೋಟಿಸ್​​ಗೆ ನಾನೇಕೆ ಹೆದರಲಿ. ಅಶೋಕ್ ಹೆದರಿರಬೇಕು ಅವರಿಗೆ ಭಯ ನನಗಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಟಿಜೆ ಅಹ್ರಾಂ ಒಬ್ಬ ಬ್ಲ್ಯಾಕ್​​ಮೇಲರ್. ಜುಲೈ 26 ಕ್ಕೆ ಬೆಳಿಗ್ಗೆ 11:30 ಕ್ಕೆ ಆತ ದೂರು ಕೊಡುತ್ತಾನೆ. ಆ ದೂರಿನ ಪರಾಮರ್ಶೆ ಮಾಡದೇ ಆ ದಿನ ಸಂಜೆಯೇ ಶೋಕಾಸ್ ನೋಟಿಸ್ ರೆಡಿ ಇದೆ ಬಂದು ಪಡೆದುಕೊಳ್ಳಿ ಎಂದು ನಮ್ಮ ಅಧಿಕಾರಿ ಎಲ್​ಕೆ ಅತೀಕ್​​ಗೆ ಹೇಳುತ್ತಾರೆ. ಜೊಲ್ಲೆ, ಮುರುಗೇಶ್ ನಿರಾಣಿ, ಜರ್ನಾರ್ಧನ ರೆಡ್ಡಿ ವಿರುದ್ಧದ ದೂರು ಇನ್ನೂ ಹಾಗೆಯೇ ಇವೆ. ಅವರಿಗೆ ಶೋಕಾಸ್ ನೋಟಿಸ್ ಕೊಟ್ಟಿಲ್ಲ. ನನಗೆ ಯಾಕೆ ತರಾತುರಿಯಲ್ಲಿ ನೋಟಿಸ್ ಕೊಟ್ಟಿದ್ದಾರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

 

 

WhatsApp Group Join Now
Telegram Group Join Now
Share This Article