ಬೆಂಗಳೂರು, ನವೆಂಬರ್ 6: ಸಿಎಂ ಸಿದ್ದರಾಮಯ್ಯ ಉಪಚುನಾವಣೆ ಅಖಾಡದಲ್ಲಿ ಅಬ್ಬರಿಸುತ್ತಿರುವಾಗಲೇ, ಅವರಿಗೆ ಮುಡಾ ಹಗರಣ ಮಗ್ಗಲ ಮುಳ್ಳಾಗಿ ಕಾಡುತ್ತಿದೆ. ಈಗಾಗಲೇ ಮುಡಾ ಕೇಸ್ ಸಂಬಂಧ ಮೈಸೂರಿನ ಲೋಕಾಯುಕ್ತ ಪೊಲೀಸರು ಸಿಎಂ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ, ಭೂ ಮಾಲೀಕ ದೇವರಾಜು ಸೇರಿದಂತೆ ಹಲವರ ವಿಚಾರಣೆ ನಡೆಸಿದ್ದಾರೆ.
ಪ್ರಕರಣದಲ್ಲಿ ಎ1 ಆಗಿರುವ ಸಿಎಂ ಸಿದ್ದರಾಮಯ್ಯಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕೊಟ್ಟಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಕ್ಷಣಗಣನೆ ಶುರುವಾಗಿದೆ. ಇಂದು ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ.