ಬೆಂಗಳೂರು ಜುಲೈ.30. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ 2025-26 ನೇ ಸಾಲಿನ ಆಯವ್ಯಯದಲ್ಲಿ ಘೋಷಣೆಮಾಡಲಾದ ಮುಖ್ಯಮಂತ್ರಿಯವರ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರಕ್ಕೆ ರೂ.50 ಕೋಟಿಗಳ ಅನುದಾನ ಹಂಚಿಕೆ ಕುರಿತು ನಡೆದ ಸಭೆಯಲ್ಲಿ ಮಾಜಿ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಿ.ನಾಗೇಂದ್ರ ಅವರು ಭಾಗವಹಿಸಿ, ಕ್ಷೇತ್ರದಲ್ಲಿ ಕೈಗೊಳ್ಳಬಹುದಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಮಾಹಿತಿ ನೀಡಿದರು.
ನಂತರ ಮುಖ್ಯಮಂತ್ರಿಗಳು ಶಾಸಕರಾದ ಬಿ.ನಾಗೇಂದ್ರ ಅವರ ಜೊತೆ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಅಭಿವೃದ್ಧಿ ಯೋಜನೆಗಳ ಸ್ಥಿತಿಗತಿ, ಅನುದಾನ ಬಳಕೆ ಹಾಗೂ ಮುಂದಿನ ದಿನಗಳಲ್ಲಿ ಅಗತ್ಯ ಕಾರ್ಯಕ್ರಮಗಳನ್ನು ಆದ್ಯತೆ ಮೇರೆಗೆ ಅನುಷ್ಠಾನಕ್ಕೆ ತರುವ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು.
ಈ ಸಭೆಯಲ್ಲಿ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರ ಸೇರಿದಂತೆ ಸಚಿವರು ಹಾಗೂ ಶಾಸಕರ ಉಪಸ್ಥಿತರಿದ್ದರು