ನೊಂದವರ ಕಣ್ಣೀರು ಒರೆಸುವ ಜೊತೆಗೆ ಅವರ ನ್ಯಾಯದ ಹೋರಾಟದಲ್ಲಿ ನಮ್ಮ ಸರ್ಕಾರ ಜೊತೆ ನಿಲ್ಲಲಿದೆ ಎಂದ ಸಿಎಂ ಸಿದ್ಧರಾಮಯ್ಯ

Ravi Talawar
ನೊಂದವರ ಕಣ್ಣೀರು ಒರೆಸುವ ಜೊತೆಗೆ ಅವರ ನ್ಯಾಯದ ಹೋರಾಟದಲ್ಲಿ ನಮ್ಮ ಸರ್ಕಾರ ಜೊತೆ ನಿಲ್ಲಲಿದೆ ಎಂದ ಸಿಎಂ ಸಿದ್ಧರಾಮಯ್ಯ
WhatsApp Group Join Now
Telegram Group Join Now

ಹೆಣ್ಣುಮಕ್ಕಳ ಮೇಲೆ ಹಾಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ಪೆನ್‌ಡ್ರೆöÊವ್ ಆರೋಪ ಪ್ರಕರಣ ಈಗ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ಎಸಗಿದ, ಬೆದರಿಕೆ ಒಡ್ಡಿದ ಹಾಗೂ ಅಪಹರಣ ಪ್ರಕರಣಗಳು ರಾಜ್ಯ, ರಾಷ್ಟç ರಾಜಕಾರಣ ಮಾತ್ರವಲ್ಲದೇ ಸಾರ್ವಜನಿಕ ವಲಯದಲ್ಲಿಯೂ ದೊಡ್ಡ ಕೋಲಾಹಲಕ್ಕೆ ಕಾರಣವಾಗಿದೆ. ಅಂತರಾಷ್ಟ್ರೀಯ ಮಾಧ್ಯಮಗಳಲ್ಲಿಯೂ ಕೂಡ ಈ ಪ್ರಕರಣದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ.

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಈ ಅಶ್ಲೀಲ ವಿಡಿಯೋ ಪ್ರಕರಣ ತೀವ್ರ ಕೋಲಾಹಲಕ್ಕೆ ಕಾರಣವಾಗಿದೆ. ಜನರಂತೂ ಛಿ.. ಥೂ ಎಂದು ಮಾತನಾಡುವಂತಾಗಿದೆ. ಈ ಪ್ರಕರಣದ ಗಂಭೀರತೆಯನ್ನರಿತ ರಾಜ್ಯ ಸರ್ಕಾರವು ಈಗಾಗಲೇ ಎಸ್‌ಐಟಿ ತಂಡ ರಚಿಸಿದ್ದು, ವಿಚಾರಣೆ ಆರಂಭವಾಗಿದೆ. ಬಹಳ ಗಂಭೀರವಾಗಿರುವ ಈ ಪ್ರಕರಣದ ತನಿಖೆಯಲ್ಲಿ ಸರ್ಕಾರ ಮೂಗು ತೂರಿಸುವುದಿಲ್ಲ. ಪಾರದರ್ಶಕ ತನಿಖೆಗೆ ಎಲ್ಲ ರೀತಿಯ ಅವಕಾಶ ಹಾಗೂ ಸಹಕಾರ ನೀಡುವುದಾಗಿ ಸ್ಪಷ್ಟಪಡಿಸಿದೆ.

ಏತನ್ಮಧ್ಯೆ ಈ ಪ್ರಕರಣದ ಸಂತ್ರಸ್ತರಿಗೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬರೆದ ಪತ್ರಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರ, ಅನ್ಯಾಯಕ್ಕೆ ಒಳಗಾದ ಸಂತ್ರಸ್ತರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಇನ್ನೊಮ್ಮೆ ಸ್ಪಷ್ಟಪಡಿಸಿದ್ದಾರೆ.

ಈ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಿ, ಇದರಲ್ಲಿ ಎಷ್ಟೇ ಪ್ರಭಾವಿಗಳು ಶಾಮೀಲಾಗಿದ್ದರೂ ಅವರನ್ನು ಕಾನೂನಿನ ಕೈಗಳಿಗೆ ಒಪ್ಪಿಸಲಾಗುವುದು. ನೊಂದವರ ಕಣ್ಣೀರು ಒರೆಸುವ ಜೊತೆಗೆ ಅವರ ನ್ಯಾಯದ ಹೋರಾಟದಲ್ಲಿ ನಮ್ಮ ಸರ್ಕಾರ ಜೊತೆ ನಿಲ್ಲಲಿದೆ ಎಂಬ ವಾಗ್ದಾನವನ್ನು ರಾಹುಲ್ ಗಾಂಧಿ ಸೇರಿದಂತೆ ನಾಡಿನ ಪ್ರತಿಯೊಬ್ಬರಿಗೂ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಸತ್ಯಮೇವ ಜಯತೇ ಎಂಬ ಘೋಷಣೆಯೊಂದಿಗೆ ರಾಹುಲ್ ಗಾಂಧಿ ಅವರು ಬರೆದ ಪತ್ರವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಬರೆದ ಸುಧೀರ್ಘ ಪತ್ರದಲ್ಲಿ “ಮುಖ್ಯಮಂತ್ರಿ ಸಿದ್ದರಾಮಯ್ಯರವರೇ, ಹಾಸನದ ಹಾಲಿ ಸಂಸದರು ನಡೆಸಿದ ಭೀಕರ ಲೈಂಗಿಕ ದೌರ್ಜನ್ಯದ ಬಗ್ಗೆ ನಾನು ನಿಮಗೆ ಪತ್ರ ಬರೆಯುತ್ತಿದ್ದೇನೆ. ಪ್ರಜ್ವಲ್ ರೇವಣ್ಣ ಹಲವಾರು ವರ್ಷಗಳಿಂದ ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಚಿತ್ರೀಕರಿಸಿದ್ದರು. ಪ್ರಜ್ವಲ್‌ರನ್ನು ಸಹೋದರ ಮತ್ತು ಮಗನಂತೆ ನೋಡುತ್ತಿದ್ದ ಅನೇಕರನ್ನು ಅತ್ಯಂತ ಹಿಂಸಾತ್ಮಕ ರೀತಿಯಲ್ಲಿ ಕ್ರೂರವಾಗಿ ನಡೆಸಿಕೊಳ್ಳಲಾಗಿದೆ ಮತ್ತು ಅವರ ಘನತೆಯನ್ನು ಕಸಿದುಕೊಳ್ಳಲಾಗಿದೆ. ನಮ್ಮ ತಾಯಂದಿರು ಮತ್ತು ಸಹೋದರಿಯರ ಮೇಲಿನ ಅತ್ಯಾಚಾರವು ಕಠಿಣ ಶಿಕ್ಷೆಗೆ ಅನುಮತಿಸುತ್ತದೆ.

2023ರ ಡಿಸೆಂಬರ್‌ನಲ್ಲೇ ಗೃಹ ಸಚಿವರಾದ ಅಮಿತ್ ಶಾ ಅವರಿಗೆ ಪ್ರಜ್ವಲ್ ರೇವಣ್ಣರ ಲೈಂಗಿಕ ದೌರ್ಜನ್ಯದ ಬಗ್ಗೆ ಜಿ.ದೇವರಾಜೇಗೌಡರು ತಿಳಿಸಿದ್ದರು ಎಂಬುದನ್ನು ತಿಳಿದು ನನಗೆ ಆಘಾತವಾಗಿದೆ. ಇನ್ನೂ ಆಘಾತಕಾರಿ ಸಂಗತಿಯೆAದರೆ, ಈ ಗಂಭೀರ ಆರೋಪಗಳನ್ನು ಬಿಜೆಪಿಯ ಹಿರಿಯ ನಾಯಕತ್ವದ ಗಮನಕ್ಕೆ ತಂದರೂ, ಸಾಮೂಹಿಕ ಅತ್ಯಾಚಾರಿಗಾಗಿ ಪ್ರಧಾನಿ ಮೋದಿ ಪ್ರಚಾರ ಮಾಡಿದರು. ಇದಲ್ಲದೆ, ತನಿಖೆಯ ಹಳಿತಪ್ಪಿಸಲು, ಭಾರತದಿಂದ ಪಲಾಯನ ಮಾಡಲು ಕೇಂದ್ರ ಸರ್ಕಾರವು ಉದ್ದೇಶಪೂರ್ವಕವಾಗಿ ಪ್ರಜ್ವಲ್ ರೇವಣ್ಣರಿಗೆ ಅವಕಾಶ ನೀಡಿತು. ಪ್ರಧಾನ ಮಂತ್ರಿ ಮತ್ತು ಗೃಹ ಸಚಿವರ ಆಶೀರ್ವಾದದೊಂದಿಗೆ ಪ್ರಜ್ವಲ್ ರೇವಣ್ಣ ಅವರು ಅನುಭವಿಸಿದ ಸಂಪೂರ್ಣ ನಿರ್ಭಯವು ಪ್ರಬಲವಾದ ಖಂಡನೆಗೆ ಅರ್ಹವಾಗಿದೆ.

ನನ್ನ ಎರಡು ದಶಕಗಳ ಸಾರ್ವಜನಿಕ ಜೀವನದಲ್ಲಿ, ಮಹಿಳೆಯರ ಮೇಲೆ ಹೇಳಲಾಗದಂತಹ ದೌರ್ಜನ್ಯದ ವಿರುದ್ಧ ನಿರಂತರವಾಗಿ ಮೌನವಹಿಸಿದ ಹಿರಿಯ ಸಾರ್ವಜನಿಕ ಪ್ರತಿನಿಧಿಯನ್ನು ನಾನು ಕಂಡಿಲ್ಲ. ಹರಿಯಾಣದ ನಮ್ಮ ಕುಸ್ತಿಪಟುಗಳಿಂದ ಹಿಡಿದು ಮಣಿಪುರದ ನಮ್ಮ ಸಹೋದರಿಯರವರೆಗೂ ಭಾರತೀಯ ಮಹಿಳೆಯರು ಇಂತಹ ಅಪರಾಧಿಗಳ ಮೇಲೆ ಪ್ರಧಾನಿಯ ಮೌನ ಬೆಂಬಲದ ಭಾರವನ್ನು ಹೊತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಮ್ಮ ತಾಯಂದಿರ ಮತ್ತು ಸಹೋದರಿಯರ ನ್ಯಾಯಕ್ಕಾಗಿ ಹೋರಾಡುವುದು ಕಾಂಗ್ರೆಸ್ ಪಕ್ಷದ ನೈತಿಕ ಕರ್ತವ್ಯವಾಗಿದೆ.

ಗಂಭೀರ ಆರೋಪಗಳ ತನಿಖೆಗಾಗಿ ಕರ್ನಾಟಕ ಸರ್ಕಾರವು ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ ಎಂದು ನಾನು ಅರ್ಥಮಾಡಿಕೊಂಡಿದ್ದೇನೆ ಮತ್ತು ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ಅನ್ನು ರದ್ದುಪಡಿಸಿ ಅವರನ್ನು ಶೀಘ್ರವಾಗಿ ಭಾರತಕ್ಕೆ ಹಸ್ತಾಂತರಿಸುವAತೆ ಪ್ರಧಾನಿಗೆ ಮನವಿ ಮಾಡಲಾಗಿದೆ. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಬೆಂಬಲವನ್ನು ದಯೆಯಿಂದ ನೀಡುವಂತೆ ನಾನು ವಿನಂತಿಸುತ್ತೇನೆ.

ನ್ಯಾಯಕ್ಕಾಗಿ ತಮ್ಮ ಹೋರಾಟದಲ್ಲಿ ಅವರು ನಮ್ಮ ಸಹಾನುಭೂತಿ ಮತ್ತು ಒಗ್ಗಟ್ಟಿಗೆ ಅರ್ಹರು. ಈ ಘೋರ ಅಪರಾಧಗಳಿಗೆ ಕಾರಣವಾದ ಎಲ್ಲ ವ್ಯಕ್ತಿಗಳನ್ನು ಕಾನೂನು ಕ್ರಮಕ್ಕೆ ತರುವುದನ್ನು ಖಚಿತಪಡಿಸಿಕೊಳ್ಳಲು ನಾವು ಸಾಮೂಹಿಕ ಕರ್ತವ್ಯವನ್ನು ಮಾಡಬೇಕಿದೆ ಎಂದು ಉಲ್ಲೇಖಿಸಿದ್ದಾರೆ.

ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಸತ್ಯಮೇವ ಜಯತೇ ಎಂಬ ಘೋಷಣೆಯೊಂದಿಗೆ ರಾಹುಲ್ ಗಾಂಧಿ ಅವರು ಬರೆದ ಪತ್ರವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿಕೊಂಡು “ಈ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಿ, ಇದರಲ್ಲಿ ಎಷ್ಟೇ ಪ್ರಭಾವಿಗಳು ಶಾಮೀಲಾಗಿದ್ದರೂ ಅವರನ್ನು ಕಾನೂನಿನ ಕೈಗಳಿಗೆ ಒಪ್ಪಿಸಲಾಗುವುದು. ನೊಂದವರ ಕಣ್ಣೀರು ಒರೆಸುವ ಜೊತೆಗೆ ಅವರ ನ್ಯಾಯದ ಹೋರಾಟದಲ್ಲಿ ನಮ್ಮ ಸರ್ಕಾರ ಜೊತೆ ನಿಲ್ಲಲಿದೆ ಎಂಬ ವಾಗ್ದಾನವನ್ನು ರಾಹುಲ್ ಗಾಂಧಿ ಸೇರಿದಂತೆ ನಾಡಿನ ಪ್ರತಿಯೊಬ್ಬರಿಗೂ ನೀಡುತ್ತಿದ್ದೇನೆ” ಎಂದು ಬರೆದುಕೊಂಡಿದ್ದಾರೆ.

ರಾಜ್ಯ, ರಾಷ್ಟç ರಾಜಕಾರಣ ಮಾತ್ರವಲ್ಲದೇ ಸಾರ್ವಜನಿಕ ವಲಯದಲ್ಲಿಯೂ ದೊಡ್ಡ ಕೋಲಾಹಲಕ್ಕೆ ಕಾರಣವಾಗಿ ರಾಜ್ಯದ ಇತ್ತೀಚಿನ ಒಂದು ಬಹಳ ಗಂಭೀರ ಎಂದೇ ಹೇಳಲಾಗುತ್ತಿರುವ ಈ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಿ, ಇದರಲ್ಲಿ ಎಷ್ಟೇ ಪ್ರಭಾವಿಗಳು ಶಾಮೀಲಾಗಿದ್ದರೂ ಅವರನ್ನು ಕಾನೂನಿನ ಕೈಗಳಿಗೆ ಒಪ್ಪಿಸಲಾಗುವುದು. ನೊಂದವರ ಕಣ್ಣೀರು ಒರೆಸುವ ಜೊತೆಗೆ ಅವರ ನ್ಯಾಯದ ಹೋರಾಟದಲ್ಲಿ ನಮ್ಮ ಸರ್ಕಾರ ಜೊತೆ ನಿಲ್ಲಲಿದೆ ಎಂಬ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಈ ಭರವಸೆಯ ದಿಟ್ಟ ನುಡಿಗಳು ಅನೇಕರ ಮೆಚ್ಚುಗೆಗೂ ಪಾತ್ರವಾಗಿವೆ. ಅಲ್ಲದೇ ಹಾಗಾಗಲಿ ಎಂದು ಬಹುತೇಕರು ಆಶಿಸಿದ್ದಾರೆ.

-ಮಂಜುನಾಥ.ಎಸ್.ಕಟ್ಟಿಮನಿ
ಹವ್ಯಾಸಿ ಪತ್ರಕರ್ತ ಹಾಗೂ ಲೇಖಕ
ವಿಜಯಪುರ

WhatsApp Group Join Now
Telegram Group Join Now
Share This Article