ಮೈಸೂರ: ನವೆಂಬರ್ನಲ್ಲಿ ಬಿಹಾರ ಚುನಾವಣೆಗಳು ನಡೆಯಲಿದೆ. 6, 11ನೇ ತಾರೀಕು ಚುನಾವಣೆ ನಡೆಯಲಿದೆ, ನವೆಂಬರ್ 14 ರಂದು ಚುನಾವಣಾ ಫಲಿತಾಂಶ ಹೊರಬೀಳಲಿದ್ದು, ಇದಾದ ನಂತರ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆಗಳು ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿಕೆ ನೀಡಿದ್ದು, ಬಿಹಾರ ಚುನಾವಣೆ ಬಳಿಕ ಸಚಿವ ಸಂಪುಟ ರಚನೆ ಮಾಡ್ತೀವಿ, 15ರಂದು ದೆಹಲಿಗೆ ಹೋಗ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಬಿಜೆಪಿ ದುರಾಡಳಿತ ಭ್ರಷ್ಟಾಚಾರಕ್ಕೆ ಜನರು ಬೇಸತ್ತಿದ್ದಾರೆ. ಈ ಹಿನ್ನಲೆ ಕಾಂಗ್ರೆಸ್ ಗೆಲ್ಲುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.


