ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯbj ವಿರುದ್ಧ ಇಡಿ ನೋಟಿಸ್ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ, ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.
ಪಾರ್ವತಿ ಸಿದ್ದರಾಮಯ್ಯ ಮತ್ತು ಸಚಿವ ಬೈರತಿ ಸುರೇಶ್ ಅವರಿಗೆ ನೀಡಲಾದ ನೋಟಿಸ್ ಅನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ, ಏಕೆಂದರೆ ಈ ಪ್ರಕರಣವು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ ಅಡಿಯಲ್ಲಿ ಬರುವುದಿಲ್ಲ. “ನ್ಯಾಯಾಂಗ ವ್ಯವಸ್ಥೆಯಲ್ಲಿ ನಮಗೆ ನಂಬಿಕೆ ಇದೆ. ಇದನ್ನು ರಾಜಕೀಯಗೊಳಿಸಬೇಡಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದು ಇಡೀ ದೇಶಕ್ಕೆ ಅನ್ವಯಿಸುತ್ತದೆ. ಅವರಿಗೆ ಆತ್ಮಸಾಕ್ಷಿ ಉಳಿದಿದ್ದರೆ ಅವರು ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಮತ್ತು ಕಾಂಗ್ರೆಸ್ ಶಾಸಕ ಪೊನ್ನಣ್ಣ ಅವರು ಹೇಳಿದ್ದಾರೆ.