ಕಾಮಿಡಿ ಕಿಲಾಡಿಗಳು ಸೀಸನ್ 3ರ ವಿನ್ನರ್, ಕಿರುತೆರೆ ನಟ ರಾಕೇಶ್ ಪೂಜಾರಿ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಭಾನುವಾರ ಉಡುಪಿಯ ನಿಟ್ಟೆಯಲ್ಲಿ ನಡೆದ ಮೆಹಂದಿ ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಇಹಲೋಕ ತ್ಯಜಿಸಿದ್ದಾರೆ.
ದಿನಕರ್ ಪೂಜಾರಿ ಹಾಗು ಶಾಂಭವಿ ದಂಪತಿಯ ಮಗನಾಗಿದ್ದ ರಾಕೇಶ್ ಅವರಿಗೆ 34 ವರ್ಷ ವಯಸ್ಸಾಗಿತ್ತು. ರಾಕೇಶ್ ಪೂಜಾರಿ ಸಾವಿನ ಸುದ್ದಿ ಕೇಳಿ ಆಘಾತಗೊಂಡಿರುವ ಕಿರುತೆರೆ ಹಾಗು ಕನ್ನಡ ಚಿತ್ರರಂಗದ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.