ನವದೆಹಲಿ, ಸೆಪ್ಟೆಂಬರ್ 25: ದೆಹಲಿಯ ವಸಂತ್ ಕುಂಜ್‌ನಲ್ಲಿರುವ ಪ್ರತಿಷ್ಠಿತ ಸಂಸ್ಥೆ ಶ್ರೀ ಶಾರದಾ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್ ನಿರ್ದೇಶಕ ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ವಿರುದ್ಧ ಗಂಭೀರವಾದ ಲೈಂಗಿಕ ದೌರ್ಜನ್ಯ, ಅತ್ಯಾಚಾರದ ಆರೋಪ ದಾಖಲಾಗಿದೆ. ಶ್ರೀ ಶಾರದಾ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್ ಕರ್ನಾಟಕದ ಶಾರದಾ ಮಠದ ಅಧೀನ ಸಂಸ್ಥೆಯಾಗಿದ್ದು, ಸದ್ಯ ಸ್ವಾಮೀಜಿಯನ್ನು ಆರೋಪ ಕೇಳಿಬಂದ ಕೂಡಲೇ ವಜಾಗೊಳಿಸಲಾಗಿದೆ. ಸಂಸ್ಥೆಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ ಸ್ವಾಮೀಜಿ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಕೇಸ್ ದಾಖಲಾಗಿದೆ.
ವಿದೇಶ ಪ್ರವಾಸದ ಆಮಿಷವೊಡ್ಡಿ ವಿದ್ಯಾರ್ಥಿಗಳನ್ನು ಮಂಚಕ್ಕೆ ಎಳೆಯುತ್ತಿದ್ದ ಕಾಮಿಸ್ವಾಮಿ!

ಈ ಬಗ್ಗೆ ನೈಋತ್ಯ ದೆಹಲಿ ಎಸಿಪಿ ಐಶ್ವರ್ಯಾ ಸಿಂಗ್ ಮಾಹಿತಿ ನೀಡಿದ್ದು, ಸ್ವಾಮೀಜಿ ವಿರುದ್ಧ ಉತ್ತರದಲ್ಲಿ ಲೈಂಗಿಕ ಕಿರುಕುಳದ ಒಂದು ದೂರು ಬಂದಿತ್ತು. ನಾವು ಸೂಕ್ತ ಸೆಕ್ಷನ್ಗಳ ಅಡಿಯಲ್ಲಿ ಕೇಸ್ ದಾಖಲಿಸಿದ್ದೇವೆ. ಎಫ್ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದವೆ ಎಂದಿದ್ದಾರೆ.
ದೆಹಲಿಯ ಪ್ರಸಿದ್ಧ ಸಂಸ್ಥೆ ಶ್ರೀ ಶಾರದಾ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್ ನಿರ್ದೇಶಕ ಹಾಗೂ ಆಶ್ರಮದ ಮುಖ್ಯಸ್ಥರಾಗಿದ್ದ ಚೈತನ್ಯಾನಂದ ಸರಸ್ವತಿ ವಿರುದ್ಧ ಲೈಂಗಿಕ ಕಿರಕುಳ, ಅತ್ಯಾಚಾರದ ಆರೋಪ ಕೇಳಿಬಂದಿದೆ. ವಿದ್ಯಾರ್ಥಿನಿಯರಿಗೆ ವಿದೇಶ ಪ್ರವಾಸದ ಆಮಿಷವೊಡ್ಡಿ ಅವರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ ಹಾಗೂ 16 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.

