ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆ 51.50 ರೂ. ಇಳಿಕೆ

Ravi Talawar
ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆ 51.50 ರೂ. ಇಳಿಕೆ
WhatsApp Group Join Now
Telegram Group Join Now

ನವದೆಹಲಿ, ಸೆಪ್ಟೆಂಬರ್ 1: ದೇಶೀಯ ತೈಲ ಮಾರುಕಟ್ಟೆ ಕಂಪನಿಗಳು  ಭಾನುವಾರ (ಆಗಸ್ಟ್ 31) 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ 51.50 ರೂ. ಇಳಿಕೆ ಮಾಡಿವೆ. ಇದರಿಂದ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಆಹಾರೋದ್ಯಮಗಳಿಗೆ ಸ್ವಲ್ಪ ಮಟ್ಟಿಗೆ ಪರಿಹಾರ ಸಿಕ್ಕಂತಾಗಿದೆ. ಪರಿಷ್ಕೃತ ದರಗಳು ಇಂದಿನಿಂದಲೇ (ಸೆಪ್ಟೆಂಬರ್ 1) ರಿಂದ ಜಾರಿಗೆ ಬಂದಿವೆ. ಪರಿಷ್ಕೃತ ಬೆಲೆಯ ಪ್ರಕಾರ, ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಮಾರಾಟ ಬೆಲೆ ಈಗ 1,580 ರೂ. ಆಗಿದ್ದು, ಪ್ರತಿ ಸಿಲಿಂಡರ್‌ಗೆ  51.50 ರೂ.ಗಳ ಕಡಿತ ಆಗಿದೆ. ಜಾಗತಿಕ ಇಂಧನ ಬೆಲೆ ಮತ್ತು ಇನ್‌ಪುಟ್ ವೆಚ್ಚಗಳಿಗೆ ಸಂಬಂಧಿಸಿದ ನಿಯಮಿತ ಮಾಸಿಕ ಪರಿಷ್ಕರಣೆಗಳ ಭಾಗವಾಗಿ ಈ ದರ ಇಳಿಕೆ ಕಡಿತ ಮಾಡಲಾಗಿದೆ ಎಂದು ಉದ್ಯಮ ಮೂಲಗಳು ತಿಳಿಸಿವೆ.

 

WhatsApp Group Join Now
Telegram Group Join Now
Share This Article