ಬೆಳಗಾವಿ,30: ಚನ್ನಮ್ಮನ ಕಿತ್ತೂರು ಪಟ್ಟಣ ಪಂಚಾಯಿತಿಯ ಸದಸ್ಯ ನಾಗರಾಜ ಅಸುಂಡಿ ಅಪಹರಣ ಮಾಡಿರುವ ಕುರಿತು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಗಳಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಂತರ ಜಿಲ್ಲೆ ವತಿಯಿಂದ ಬ್ರಹತ್ ಪತಿಭಟನೆ ಮುಖಾಂತರ ಮನವಿ ಸಲ್ಲಿಸಲಾಯಿತು.
ಈ ಪ್ರತಿಭಟನಾ ರ್ಯಾಲಿಯಲ್ಲಿ ಕಿತ್ತೂರಿನ ದುರಹಂಕಾರಿ ಶಾಸಕರ ಚೇಲಾಗಳಿಂದ ಪಟ್ಟಣ ಪಂಚಾಯಿತಿ ಸದಸ್ಯನ ಅಪಹರಣ ಮಾಡಿದ್ದಾರೆಂದು ಭಾ.ಜ.ಪಾ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ ಆರೋಪ ಮಾಡಿದರು.
ಅವರು ಶುಕ್ರವಾರದಂದು ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಾoತರ ಜಿಲ್ಲೆ ವತಿಯಿಂದ ಬೆಳಗಾವಿ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿ ನಂತರ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿ ಇದೇ ಸಪ್ಟೆಂಬರ್ 3 ರಂದು ನಡೆಯಲಿರುವ ಕಿತ್ತೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯ ಹಿನ್ನೆಲೆಯಲ್ಲಿ ಚನ್ನಮ್ಮನ ಕಿತ್ತೂರು ಪಟ್ಟಣ ಪಂಚಾಯಿತಿ ಸದಸ್ಯರಾದ ನಾಗರಾಜ ಅಸುಂಡಿ ಅವರ ಮೇಲೆ ಕಾಂಗ್ರೆಸ್ ಪಕ್ಷದ ಪುಂಡರು ಗುರುವಾರ ರಾತ್ರಿ ಹಲ್ಲೆ ನಡೆಸಿ ಅಪಹರಣ ಮಾಡಿದ್ದಾರೆ. ಅಧಿಕಾರದ ದುರಾಸೆಯಿಂದ ಕಾಂಗ್ರೆಸ್ ಪಕ್ಷವು ಇಂತಹ ನೀಚ ಕೃತ್ಯ ಎಸಗಿದ್ದು ಇದು ಪ್ರಜಾಪ್ರಭುತ್ವದ ಕಗ್ಗೊಲೆ ಆದಂತಿದೆ. ಈ ಕೃತ್ಯಕ್ಕೆ ಸ್ಥಳೀಯ ಕಾಂಗ್ರೆಸ್ ಶಾಸಕರು ಕುಮಕ್ಕು ನೀಡಿದ್ದಾರೆ.
ಈ ಘಟನೆಯ ಬಗ್ಗೆ ಈಗಾಗಲೇ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕೂಡಲೇ ಇದನ್ನು ಪರಿಶೀಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸಿ ಸ್ಥಳೀಯ ಶಾಸಕರು ಮತ್ತು ಕೃತ್ಯ ಎಸಗಿದ ಆರೋಪಿಗಳಿಗೆ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದರು.ನಂತರ ಭಾ.ಜ.ಪಾ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಸಪ್ಟೆಂಬರ್ 3ರಂದು ನಡೆಯಬೇಕಿದ್ದ ಚುನಾವಣೆಯನ್ನು ಮುಂದೂಡುವಂತೆ ಮನವಿ ಪತ್ರ ಸಲ್ಲಿಸಿದರು.
ಭಾ.ಜ.ಪಾ ಮುಖಂಡರಾದ ಲಕ್ಷ್ಮೀ ಇನಾಮದಾರ ಮಾತನಾಡಿ ಈ ಘಟನೆಯ ಬಗ್ಗೆ ಸೂಕ್ತವಾದ ವಿಚಾರಣೆ ಯಾಗುವವರೆಗೆ ಹಾಗೂ ಅಪಹರಣಗೊಂಡ ನಮ್ಮ ಪಕ್ಷದ ಸದಸ್ಯರಾದ ನಾಗರಾಜ ಅಸುಂಡಿ ಅವರು ಸುರಕ್ಷಿತವಾಗಿ ಮನೆಗೆ ತೆರಳುವ ವರೆಗೆ ಸೆಪ್ಟೆಂಬರ್ 3 ರಂದು ನಡೆಯಬೇಕಿದ್ದ ಚುನಾವಣೆಯನ್ನು ಮುಂದೂಡಿ ಆದೇಶ ಹೊರಡಿಸಬೇಕೆಂದು ವಿನಂತಿಸಿಕೊಂಡರು.
ಈ ಸಂದರ್ಭದಲ್ಲಿ ಭಾ.ಜ.ಪಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ ದೇಶಪಾಂಡೆ, ಧನಶ್ರೀ ದೇಸಾಯಿ, ಧನಂಜಯ ಜಾದವ, ಯುವರಾಜ್ ಜಾದವ, ಮಲ್ಲಿಕಾರ್ಜುನ್ ಮಾದಮ್ಮನವರ, ನಿತಿನ್ ಚೌಗಲೆ,ಸಚಿನ್ ಕಡಿ, ಮಹೇಶ್ ಮೋಹಿತೆ, ಸಂತೋಷ್ ದೇಶನೂರ, ಚೇತನ ಅಂಗಡಿ, ಉಮೇಶ್ ಪುರಿ, ಬಾಳೇಶ್ ಚವ್ವನ್ನವರ್, ಪ್ರಶಾಂತ್ ಅಮ್ಮಿನಭಾವಿ, ಶ್ರೀಕರ ಕುಲಕರ್ಣಿ,ವಿಠ್ಠಲ ಸಾಯನ್ನವರ, ನಾಗಪ್ಪ ಸಂಗೊಳ್ಳಿ, ವೀರಭದ್ರ ಪೂಜಾರಿ, ವಿದ್ಯಾ ಪಾಟೀಲ ಹಾಗೂ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು