ಬಳ್ಳಾರಿ ಅ 21. ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ, ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರ ಸ್ಥಾನಕ್ಕೆ ಜಿ.ಎಸ್.ಈರನಗೌಡ ಅವರು ನೇಮಕಗೊಂಡ ಹಿನ್ನೆಲೆಯಲ್ಲಿ, ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಸನ್ಮಾನಿಸಿ ಅಭಿನಂದನೆಗಳನ್ನು ತಿಳಿಸಲಾಯಿತು.
ಈ ಸಂಧರ್ಭದಲ್ಲಿ ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಲ್ಲಂ ಪ್ರಶಾಂತ್ ಅವರು,ಲಿಡ್ಕರ್ ಅಧ್ಯಕ್ಷರಾದ ಮುಂಡ್ರಿಗಿ ನಾಗರಾಜ್ ಅವರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾದ ಹುಮಯೂನ್ ಖಾನ್ ಅವರು, ಡಿಸಿಸಿ ಕಾರ್ಯದರ್ಶಿಗಳಾದ ಶ್ರೀನಿವಾಸುಲು, ಕಾರ್ಯಕಾರಿಣಿ ಸಮಿತಿಯ ಸದಸ್ಯರಾದ ವೆಂಕಟಲಕ್ಷ್ಮಿ ನಾರಾಯಣ, ಮುಂಚೂಣಿ ಘಟಕಗಳ ಅಧ್ಯಕ್ಷರಾದ ಎರಕುಲ ಸ್ವಾಮಿ, ಅಲಿವೇಲು ಸುರೇಶ್, ಶೇಕ್ ಅಫಾಕ್ ಹುಸೇನ್, ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ನ ಅಧ್ಯಕ್ಷರಾದ ಫಾರಾಜ್ ಖಾನ್, ಮುಖಂಡರುಗಳಾದ ಶ್ರೀಮತಿ ಬಿ.ಎ.ಮಲ್ಲೇಶ್ವರಿ, ಶ್ರೀಮತಿ ಪರ್ವಿನ್ ಭಾನು, ಸಿ.ಅತ್ತವುಲ್ಲಾ, ಲಿಂಗರಾಜು ಮತ್ತು ಇನ್ನಿತರರು ಉಪಸ್ಥಿತರಿದ್ದರು.