ಬಿಹಾರ, ಆಗಸ್ಟ್ 29: ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಅಧಿಕಾರ ಯಾತ್ರೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್ ಕಾರ್ಯಕರ್ತರೊಬ್ಬರು ನಿಂದಿಸಿದ್ದ ಘಟನೆ ನಡೆದಿತ್ತು. ಇದಕ್ಕೆ ಸಂಬಂಧಿಸಿದಂತೆ ಇಂದು ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ಪಕ್ಷದ ಬಾವುಟ ಹಿಡಿದುಕೊಂಡು ಹೊಡೆದಾಡಿಕೊಂಡಿರುವ ವೈರಲ್ ಆಗಿದೆ.
ಬಿಹಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ‘ಮತದಾರರ ಅಧಿಕಾರ ಯಾತ್ರೆ’ಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ತಾಯಿಯನ್ನು ನಿಂದಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ, ಸಿಮ್ರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಮತ್ತು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತಿದೆ ಎಂದು ಪೊಲೀಸರು ಎಕ್ಸ್ ಪೋಸ್ಟ್‌ನಲ್ಲಿ ಬರೆದಿದ್ದಾರೆ.