ಬೆಂಗಳೂರು, ಸೆಪ್ಟೆಂಬರ್ 29: ಬಿಜೆಪಿ ರ್ಕಾರವನ್ನು 40% ಕಮಿಷನ್ ಸರ್ಕಾರ ಎಂದು ಟೀಕಿಸಿದ್ದ ಕಾಂಗ್ರೆಸ್ ಬಂಡವಾಳ ಈಗ ಬಯಲಾಗಿದೆ. ಗುತ್ತಿಗೆದಾರರ ಸಂಘದವರು 80% ಕಮಿಷನ್ ಆರೋಪ ಮಾಡಿ ಪತ್ರ ಬರೆದಿದ್ದಾರೆ. ಸಿಎಂ ಸಿದ್ದರಾಮಯ್ಯ ತಕ್ಷಣವೇ ರಾಜೀನಾಮೆ ನೀಡಲಿ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ ಆಗ್ರಹಿಸಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಲ್ಲದೆ, ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಸರ್ಕಾರ 80% ಕಮಿಷನ್; ಗಂಭೀರ ಆರೋಪದ ಜೊತೆಗೆ ಸಿಎಂ ರಾಜೀನಾಮೆಗೆ ಆರ್ ಅಶೋಕ ಆಗ್ರಹ

ಗುತ್ತಿಗೆದಾರರ ಸಂಘದಿಂ ಸರ್ಕಾರದ ವಿರುದ್ಧ ಪತ್ರ ಬರೆದಿರುವ ವಿಚಾರವನ್ನು ಉಲ್ಲೇಖಿಸಿದ ಅಶೋಕ್, ‘ಇದು ಕರ್ನಾಟಕ ಸರ್ಕಾರ ಭ್ರಷ್ಟ ಸರ್ಕಾರ ಎನ್ನುವುದಕ್ಕೆ ಸಾಕ್ಷಿ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಇದೇ ಗುತ್ತಿಗೆದಾರರು 40% ಕಮಿಷನ್ ಆರೋಪ ಮಾಡಿದ್ದರು. ಈಗ ಕಾಂಗ್ರೆಸ್ ಸರ್ಕಾರದಲ್ಲಿ ಅದು ಡಬಲ್ ಆಗಿದೆ ಎಂದು ಪತ್ರ ಬರೆದಿದ್ದಾರೆ. ಇದೊಂದು ಆಧಿಕೃತ ಪತ್ರ. ಹೀಗಾಗಿ ಇದುವೇ ಸಾಕ್ಷಿ’ ಎಂದು ಅಶೋಕ್ ಹೇಳಿದರು.
ಗುತ್ತಿಗೆದಾರರ ಸಂಘದ ಪತ್ರ ಉಲ್ಲೇಖಿಸಿ ಪ್ರತಿಪಕ್ಷ ಆರ್ ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ 80% ಕಮಿಷನ್ ಆರೋಪ ಮಾಡಿದ್ದು, ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಕಾಂಗ್ರೆಸ್ ಈಗ ತಾನೇ ಭ್ರಷ್ಟಾಚಾರದ ಬಲೆಗೆ ಸಿಲುಕಿದೆ. ಗುತ್ತಿಗೆದಾರರ ಪತ್ರವೇ ಇದಕ್ಕೆ ಸಾಕ್ಷಿ ಎಂದು ಆರ್. ಅಶೋಕ ಹೇಳಿದ್ದಾರೆ.