ಉಚಿತ ಕೊಡುಗೆಗಳು ಅಪಾಯಕಾರಿ; ಗ್ಯಾರಂಟಿ ಬಗ್ಗೆ ಕಾಂಗ್ರೆಸ್‌ ಶಾಸಕ ಆರ್‌ವಿ ದೇಶಪಾಂಡೆ ಅಚ್ಚರಿ ಹೇಳಿಕೆ

Ravi Talawar
ಉಚಿತ ಕೊಡುಗೆಗಳು ಅಪಾಯಕಾರಿ; ಗ್ಯಾರಂಟಿ ಬಗ್ಗೆ ಕಾಂಗ್ರೆಸ್‌ ಶಾಸಕ ಆರ್‌ವಿ ದೇಶಪಾಂಡೆ ಅಚ್ಚರಿ ಹೇಳಿಕೆ
WhatsApp Group Join Now
Telegram Group Join Now

ಬೆಂಗಳೂರು, ಮಾರ್ಚ್ 29: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳ  ಬಗ್ಗೆ ಪ್ರತಿಪಕ್ಷಗಳಿಂದ ಆಗಾಗ ಆಕ್ಷೇಪ ವ್ಯಕ್ತವಾಗುತ್ತಲೇ ಇದೆ. ಇದೀಗ ಕಾಂಗ್ರೆಸ್ ಶಾಸಕ, ಕರ್ನಾಟಕ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರೂ ಆಗಿರುವ ಆರ್​​ವಿ ದೇಶಪಾಂಡೆ  ಕೂಡ ಉಚಿತ ಯೋಜನೆಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಉಚಿತ ಕೊಡುಗೆ ಎಂಬುದು ಅಪಾಯಕಾರಿ ಎಂದು ಅವರು ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಅಂಬೇವಾಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೆರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಈ ಹೇಳಿಕೆ ನೀಡಿದ್ದಾರೆ.

ಉಚಿತ ಕೊಡುಗೆ ಎಂಬುದು ಅಪಾಯಕಾರಿ ಪದ. ಜನರಿಗೆ ಏನನ್ನೂ ಉಚಿತವಾಗಿ ನೀಡಬಾರದು ಮತ್ತು ಪ್ರತಿಯೊಂದು ಸೇವೆಗೂ ಶುಲ್ಕ ನಿಗದಿಪಡಿಸಬೇಕು ಎಂದು ಆರ್​ವಿ ದೇಶಪಾಂಡೆ ಅಭಿಪ್ರಾಯಪಟ್ಟಿದ್ದಾರೆ. ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತ ಬಸ್ ಪ್ರಯಾಣವನ್ನು ಆನಂದಿಸುತ್ತಿದ್ದಾರೆ. ಈ ಯೋಜನೆಯನ್ನು ಪುರುಷರಿಗೂ ವಿಸ್ತರಿಸಬೇಕೆಂಬ ಬೇಡಿಕೆ ಇತ್ತು. ಎಲ್ಲವನ್ನೂ ಉಚಿತವಾಗಿ ನೀಡಿದರೆ ನಾವು ಸಾರಿಗೆ ಸಂಸ್ಥೆಗಳನ್ನು ನಡೆಸುವುದು ಹೇಗೆ ಎಂದು ಅವರು ಪ್ರಶ್ನಿಸಿದ್ದಾರೆ. ಅಂಬೇವಾಡಿಯ ಕಾರ್ಯಕ್ರಮದ ಬಗ್ಗೆ ಆರ್​ವಿ ದೇಶಪಾಂಡೆ ಫೇಸ್​ಬುಕ್​ನಲ್ಲಿ ಚಿತ್ರ ಸಹಿತ ವಿವರ ಹಂಚಿಕೊಂಡಿದ್ದಾರೆ.

WhatsApp Group Join Now
Telegram Group Join Now
Share This Article