ಧರ್ಮಸ್ಥಳ ಕೇಸ್‌ನಲ್ಲಿ ಕಾಂಗ್ರೆಸ್‌ ಸಂಸದ ಸಸಿಕಾಂತ್‌ ಶಾಸಕ ಜನಾರ್ಧನ ರೆಡ್ಡಿ ವಿರುದ್ಧ ಕೋರ್ಟ್‌ ಮೊರೆ

Ravi Talawar
ಧರ್ಮಸ್ಥಳ ಕೇಸ್‌ನಲ್ಲಿ ಕಾಂಗ್ರೆಸ್‌ ಸಂಸದ ಸಸಿಕಾಂತ್‌ ಶಾಸಕ ಜನಾರ್ಧನ ರೆಡ್ಡಿ ವಿರುದ್ಧ ಕೋರ್ಟ್‌ ಮೊರೆ
WhatsApp Group Join Now
Telegram Group Join Now

ದರ್ಮಸ್ಥಳ:  ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ಬಗ್ಗೆ ತಮ್ಮ ಮೇಲೆ ಬಂದಿರುವ ಆರೋಪಗಳ ಕುರಿತು ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್ ಗಂಗಾವತಿ ಶಾಸಕ ಜನಾರ್ದನರೆಡ್ಡಿ ವಿರುದ್ಧ ನ್ಯಾಯಾಲಯ ಮೊರೆ ಹೋಗಿದ್ದಾರೆ.

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದಲ್ಲಿ ತಮ್ಮ ಹೆಸರನ್ನು ಅನವಶ್ಯಕವಾಗಿ ಎಳೆದು ತರಲಾಗಿದೆ ಎಂದು ಶಾಸಕ ಜನಾರ್ದನರೆಡ್ಡಿ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸೆಂಥಿಲ್, ಈಗ ನಡೆಯುತ್ತಿರುವ ಎಸ್‌ಐಟಿ ತನಿಖೆಯ ಹಿಂದಿನ ಚಿತ್ರಕಥೆಗಾರ ಮತ್ತು ಮಾಸ್ಟರ್ ಮೈಂಡ್ ಎಂದು ತಮ್ಮನ್ನು ತಪ್ಪಾಗಿ ಬಿಂಬಿಸಲಾಗಿದೆ.

ಆರಂಭದಲ್ಲಿ, ನಾನು ಈ ಬಗ್ಗೆ ಪ್ರತಿಕ್ರಿಯಿಸದಿರಲು ನಿರ್ಧರಿಸಿದ್ದೆ. ಜನಾರ್ದನ ರೆಡ್ಡಿಯವರು ಆರೋಪ ಮಾಡಿದ ಸಂದರ್ಭದಲ್ಲಿ ನಾನು ಸಂಸತ್ತು ಅಧಿವೇಶನದಲ್ಲಿ ಭಾಗಿಯಾಗಿದ್ದೆ. ಅವರ ಆರೋಪಗಳು ಬಾಲಿಶವಾಗಿವೆ ಎಂದರು.

WhatsApp Group Join Now
Telegram Group Join Now
Share This Article