ಶ್ರೀನಗರ: ನೂತನವಾಗಿ ರಚನೆಯಾದ ಜಮ್ಮು-ಕಾಶ್ಮೀರ ಸರ್ಕಾರದಲ್ಲಿ ಒಮರ್ ಅಬ್ದುಲ್ಲಾ ನೇತೃತ್ವದ ಸಚಿವ ಸಂಪುಟವನ್ನು ಸೇರದಿರಲು ಕಾಂಗ್ರೆಸ್ ನಿರ್ಧರಿಸಿದೆ. ಕೇಂದ್ರಾಡಳಿತ ಪ್ರದೇಶಕ್ಕೆ ರಾಜ್ಯದ ಸ್ಥಾನಮಾನ ಮರು ಸ್ಥಾಪಿಸದಿರುವುದು ಪಕ್ಷದ ಅಸಮಾಧಾನಕ್ಕೆ ಕಾರಣ ಎಂದು ಕಾಂಗ್ರೆಸ್ ಬುಧವಾರ ಹೇಳಿದೆ.
ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ವೇಳೆಯಲ್ಲಿ ಭರವಸೆ ನೀಡಿರುವಂತೆ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಮರುಸ್ಥಾಪಿಸುವಂತೆ ಕಾಂಗ್ರೆಸ್ ಬಲವಾಗಿ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದೆ.
ಆದರೆ, ನಮ್ಮ ಬೇಡಿಕೆ ಈಡೇರಿಲ್ಲ. ಹೀಗಾಗಿ ಅಸಮಾಧಾನಗೊಂಡಿರುವುದರಿಂದ ಈ ಈ ಸಮಯದಲ್ಲಿ ಸಚಿವ ಸಂಪುಟವನ್ನು ಸೇರುತ್ತಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿ (ಜೆಕೆಪಿಸಿಸಿ) ಮುಖ್ಯಸ್ಥ ತಾರಿಕ್ ಹಮೀದ್ ಕರ್ರಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.