ಬೆಂಗಳೂರು, ನವೆಂಬರ್ 9: ದಿನದಿಂದ ದಿನಕ್ಕೆ ಸಾಮಾನ್ಯ ಜನರ ಬದುಕು ದುಬಾರಿಯಾಗುತ್ತಿದೆ. ಅಗತ್ಯ ವಸ್ತುಗಳ ಬೆಲೆ ದುಬಾರಿಯಾಗುತ್ತಿದ್ದು ಬಡವರು, ಮಧ್ಯಮವರ್ಗದವರು ಜೀವನ ನಡೆಸುವುದು ಕಷ್ಟವಾಗಿ ಹೋಗಿದೆ.
ಈ ಮಧ್ಯೆ, ಈರುಳ್ಳಿ ಬೆಲೆ ಏರಿಕೆಯಾಗುತ್ತಲೇ ಇದ್ದು ಗ್ರಾಹಕರಿಗೆ ಕಣ್ಣಿರಿಳಿಸುತ್ತಿದೆ. ಸದ್ಯ ರಾಜ್ಯದಲ್ಲಿ ಮಳೆ ತಗ್ಗಿದೆ. ಆದರೂ ಕಳೆದ ತಿಂಗಳು ಬಂದಂತಹ ಅಕಾಲಿಕ ಮಳೆಗೆ ಈರುಳ್ಳಿ ಬೆಳೆ ನೀರುಪಾಲಾಗಿದ್ದು, ಮಳೆಯಿಂದ ರಕ್ಷಿಸಿದ ಈರುಳ್ಳಿ ಇಟ್ಟಲ್ಲೇ ಕೊಳೆತು ಹೋಗುತ್ತಿದೆ. ಹೀಗಾಗಿ ದರ ಏರಿಕೆಯಾಗಿದೆ. ಕೆಜಿಗೆ 50 ರೂ. ಇದ್ದ ಈರುಳ್ಳಿಯ ಬೆಲೆ ಇದೀಗಾ 60 ರಿಂದ 80 ರೂಪಾಯಿ ವರೆಗೆ ಏರಿಕೆಯಾಗಿದೆ.