ತಂತ್ರಜ್ಞಾನ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಸಹಕಾರಿಯೇ ಹೊರತು ಬಿರುಗಾಳಿಯಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಂತ್ರಜ್ಞಾನದಿಂದಾಗಿಯೇ ಮಕ್ಕಳು ಹಾಳಾಗುತ್ತಿದ್ದಾರೆ, ನಿತ್ಯ ಸಿನೆಮಾ, ರೀಲ್ಸ್ಗಳನ್ನು ನೋಡುತ್ತಿದ್ದಾರೆ ಎಂದುಕೊಳ್ಳುವುದು ತಪ್ಪು, ಅದು ಶಿಕ್ಷಣದಲ್ಲಿ ಪ್ರಮುಖ ಪಾತ್ರವಹಿಸಿದೆ.
ಪ್ರತಿಯೊಂದು ಮಗುವೂ ವಿಶೇಷ, ಅವರನ್ನು ಬೇರೆಯವರೊಂದಿಗೆ ಹೋಲಿಸಬೇಡಿ ಎಂದು ಅವರು ಹೇಳಿದರು. ಮಕ್ಕಳ ಮೇಲೆ ಒತ್ತಡ ಹೇರಬೇಡಿ. ಮಗು ಸ್ವತಃ ಉತ್ತಮವಾಗಲು ಮತ್ತು ಮೊದಲಿಗಿಂತ ಉತ್ತಮವಾಗಲು ಪ್ರಯತ್ನಿಸುತ್ತದೆ. ನಿಮ್ಮ ಮಾನಸಿಕ ಚಿಂತೆಗಳನ್ನು ಜನರೊಂದಿಗೆ ಹಂಚಿಕೊಳ್ಳಲು ಕಲಿಯಿರಿ. ಇದು ಮನಸ್ಸನ್ನು ಶಾಂತವಾಗಿರಿಸುತ್ತದೆ, ಕುಟುಂಬದ ಯಾವುದೇ ಸದಸ್ಯರೊಂದಿಗೆ ಮಾತನಾಡಿ ಎಂದು ಸಲಹೆ ನೀಡಿದರು.