ಬೆಂಗಳೂರು: ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿದೆ.
ಮಹಿಳೆಯನ್ನು ಅಪಹರಿಸಿದ ಪ್ರಕರಣಲ್ಲಿ ಆರೋಪ ಎದುರಿಸುತ್ತಿರುವ ಹೊಳೆನರಸೀಪುರ ಶಾಸಕ ಹೆಚ್.ಡಿ. ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ನಿರಾಕರಿಸಿ ತೀರ್ಪು ನೀಡಿದೆ.
ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮೇ 6ಕ್ಕೆ ನ್ಯಾಯಾಲಯವು ಮೂಂದೂಡಿದೆ. ಮೈಸೂರಿನ ಕೆ.ಆರ್. ನಗರ ಠಾಣೆಯಲ್ಲಿ ಮಹಿಳೆ ಅಪಹರಣ ಕುರಿತಂತೆ ದೂರು ದಾಖಲಾಗಿತ್ತು. ಸಂತ್ರಸ್ತೆಯ ಪುತ್ರ ನನ್ನ ತಾಯಿ ಅಪಹರಣವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ದಾಖಲಾಗಿರುವ ಪ್ರಕರಣಗಳ ವಿಚಾರಣೆಗಾಗಿ ಎಸ್ಐಟಿ ರೇವಣ್ಣ ಅವರಿಗೆ ನೋಟಿಸ್ ನೀಡಿತ್ತು