ಬೆಂಗಳೂರು.ರಾಮನಗರ, (ಅಕ್ಟೋಬರ್ 23): ಚನ್ನಪಟ್ಟಣ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಯಾರು ಎನ್ನುವುದು ಬಹಿರಂಗವಾಗಿದೆ. ಕಳೆದ ಎರಡು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಚರ್ಚೆ ನಡೆದಂತೆ, ಕುಮಾರಸ್ವಾಮಿ ಹೇಳಿದಂತೆ ಕೊನೆ ಕ್ಷಣದಲ್ಲಿ ಸಿಪಿ ಯೋಗೇಶ್ವರ್ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಇಂದು (ಅಕ್ಟೋಬರ್ 23) ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಅನುಪಸ್ಥಿತಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಯೋಗೇಶ್ವರ್ ಅಧಿಕೃತವಾಗಿ ಕಾಂಗ್ರೆಸ್ ಮನೆ ಸೇರಿದರು. ಈ ಮೂಲಕ ಯೋಗೇಶ್ವರ್, ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ನಿಂದ ಕಣಕ್ಕಿಳಿಯುವುದು ಖಚಿತವಾಗಿದೆ.