ಹೊಸ ಮೋಕಾದಲ್ಲಿ ಮತದಾನ ಜಾಗೃತಿ ಅಂಗವಾಗಿ ಕ್ರಿಕೆಟ್ ಓಟರ್ಸ್ ಕಪ್ ಪಂದ್ಯಾವಳಿ

Ravi Talawar
ಹೊಸ ಮೋಕಾದಲ್ಲಿ ಮತದಾನ ಜಾಗೃತಿ ಅಂಗವಾಗಿ ಕ್ರಿಕೆಟ್ ಓಟರ್ಸ್ ಕಪ್ ಪಂದ್ಯಾವಳಿ
WhatsApp Group Join Now
Telegram Group Join Now

ಬಳ್ಳಾರಿ,01    ಮೇ 07 ರಂದು ಎಲ್ಲಾ ಕ್ರೀಡಾಪಟುಗಳು ತಪ್ಪದೇ ಮತದಾನ ಮಾಡಿ ಹಾಗೂ ತಮ್ಮ ಸುತ್ತಮುತ್ತಲಿನ ಅರ್ಹ ನಾಗರಿಕರಿಗೂ ಮತದಾನ ಮಾಡುವಂತೆ ತಿಳಿಸಿ ಎಂದು ತಾಲ್ಲೂಕು ಸ್ವೀಪ್ ನೋಡೆಲ್ ಅಧಿಕಾರಿ ಹಾಗೂ ತಾಪಂ ಇಒ ಮಡಗಿನ ಚನ್ನಬಸಪ್ಪ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಬಳ್ಳಾರಿ ತಾಲ್ಲೂಕು ಆಡಳಿತ, ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಸಾರ್ವತ್ರಿಕ ಚುನಾವಣಾ-2024ರ ಮತದಾನ ಜಾಗೃತಿ ಮೂಡಿಸುವ ನಿಮಿತ್ತ ಹೊಸ ಮೋಕ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಹೋಬಳಿ ಮಟ್ಟದ ಪುರುಷರ ಓಟರ್ಸ್ ಕಪ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕ್ರೀಡಾಪಟುಗಳು ಆಟದಲ್ಲಿ ಉತ್ಸುಕರಾದಂತೆ ಮತ ಚಲಾವಣೆಯಲ್ಲಿ ಕೂಡ ಉತ್ಸುಕತೆಯಿಂದ ಮತದಾನ ಮಾಡಬೇಕು ಎಂದರು. ಈ ಸಂದರ್ಭದಲ್ಲಿ ಪಂಚಾಯತ್ ರಾಜ್ ಇಲಾಖೆಯ ಸಹಾಯಕ ನಿರ್ದೇಶಕ ಮಹಮ್ಮದ್ ಗೌಸ್ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article