ತಿರುವನಂತಪುರಂ, ಜುಲೈ 25: ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿ ಗೋವಿಂದಚಾಮಿ, ಕೇರಳದ ಕಣ್ಣೂರು ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. 2011ರಲ್ಲಿ ಈತ ಓರ್ವ ಯುವತಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ.
ಫೆಬ್ರವರಿ 1, 2011 ರಂದು ಎರ್ನಾಕುಲಂನಿಂದ ಶೋರನೂರಿಗೆ ಹೋಗುವ ಪ್ಯಾಸೆಂಜರ್ ರೈಲಿನಲ್ಲಿ ಒಂಟಿಯಾಗಿ ಪ್ರಯಾಣಿಸುತ್ತಿದ್ದ ಯುವತಿ ಮೇಲೆ ಶೋರ್ನೂರ್ ಬಳಿಯ ಮಂಜಕ್ಕಾಡ್‌ನಲ್ಲಿ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದ. . ಅವನು ಹೇಗೆ ತಪ್ಪಿಸಿಕೊಂಡಿದ್ದಾನೆ ಎಂಬುದನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.