‘ತಿಂಗಳ ಸೊಬಗು’ ಸಾಂಸ್ಕೃತಿಕ ಕಾರ್ಯಕ್ರಮ: ಕಲಾ ಪ್ರೇಕ್ಷಕರಿಗೆ ಭರಪೂರ ಮನರಂಜನೆ

Ravi Talawar
‘ತಿಂಗಳ ಸೊಬಗು’ ಸಾಂಸ್ಕೃತಿಕ ಕಾರ್ಯಕ್ರಮ: ಕಲಾ ಪ್ರೇಕ್ಷಕರಿಗೆ ಭರಪೂರ ಮನರಂಜನೆ
WhatsApp Group Join Now
Telegram Group Join Now
ಬಳ್ಳಾರಿ,ಜೂ.17 :ಸ್ಥಳೀಯ ಮಟ್ಟದ ಕಲಾ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಾಂಸ್ಕೃತಿಕ ಸಮುಚ್ಚಯ ನಿರ್ವಹಣಾ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಪ್ರತಿ ತಿಂಗಳ ಮೂರನೇಯ ಶನಿವಾರದಂದು ನಗರದ ಡಾ.ರಾಜಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯ ಆವರಣದ ನಾಡೋಜ ಸುಭದ್ರಮ್ಮ ಮನ್ಸೂರು ಬಯಲು ರಂಗಮಂದಿರದಲ್ಲಿ ‘ತಿಂಗಳ ಸೊಬಗು’ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುತ್ತಿದೆ.
ಈ ತಿಂಗಳ ಶನಿವಾರ (ಜೂ.15 ರಂದು) ಏರ್ಪಡಿಸಿದ್ದ ‘ತಿಂಗಳ ಸೊಬಗು’ ಸಾಂಸ್ಕೃತಿಕ ಕಾರ್ಯಕ್ರಮಗಳು ಮನಸಿಗೆ ತುಸು ನೆಮ್ಮದಿ ದೊರೆಯುವ ತವಕದಿಂದ ಆಗಮಿಸಿದ್ದ ಕಲಾ ಪ್ರೇಕ್ಷಕರಿಗೆ, ಸಾರ್ವಜನಿಕರಿಗೆ ಭರಪೂರ ಮನರಂಜನೆ ನೀಡಿತು.
ಮುಸ್ಸಂಜೆ ಮೋಡ ಕವಿದು ಕತ್ತಲು ಆಗಮನ ಸಮಯದಲ್ಲಿ ಬಳ್ಳಾರಿ ಮೂಲದ ಜೀ ಕನ್ನಡ ವಾಹಿನಿಯ ಸರಿಗಮಪ -19 ರ ಸ್ಪರ್ಧಾಳು ಸೃಷ್ಟಿ ಸುರೇಶ್ ಅವರ ಸುಗಮ ಸಂಗೀತವು ಕೇಳುಗರು ಕಿವಿ ತಂಪಾಗಿಸಿತು. ಸಂಗೀತಕ್ಕೆ ಮನಸೋತು ಕಲಾ ಪ್ರೇಕ್ಷಕರು ಚಪ್ಪಾಳೆಗಳ ಸುರಿಮಳೆಗೈದರು.
ಸಿರುಗುಪ್ಪದ ಕೆ.ನರಸಿಂಹ ಮೂರ್ತಿ ಅವರ ಹಾಸ್ಯ ಚಟಾಕಿಗೆ ನೆರೆದಿದ್ದವರು ನಗೆಗಡಲಲ್ಲಿ ತೇಲಾಡಿದರು. ಬಳ್ಳಾರಿಯ ಸುಜಾತ ಕಲಾ ಟ್ರಸ್ಟ್ ಅವರ ಸಮೂಹ ನೃತ್ಯವು ನೋಡುಗರ ಕಣ್ಮನ ಸೆಳೆಯಿತು. ಈ ಸಂಧರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಕಲಾವಿದರು, ಸಾರ್ವಜನಿಕರು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article