ಕೋಲಾರ, ಆಗಸ್ಟ್.27: ಇಂದು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಕೆಎಎಸ್ ಪ್ರಿಲಿಮ್ಸ್ ಪರೀಕ್ಷೆ ಹಿನ್ನೆಲೆ ಕೋಲಾರ ಜಿಲ್ಲಾಡಳಿತ ಪರೀಕ್ಷಾರ್ಥಿಗಳಿಗೆ ಊಟ, ವಸತಿ ವ್ಯವಸ್ಥೆ ಮಾಡಿದೆ. ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾರಿಂದ ಊಟ, ವಸತಿ ಸೌಲಭ್ಯ ಕಲ್ಪಿಸಲಾಗುತ್ತಿದೆ.
ಕೋಲಾರದ 12 ಪರೀಕ್ಷಾ ಕೇಂದ್ರಗಳಲ್ಲಿ ಕೆಪಿಎಸ್ಸಿ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲು ಬೇರೆಡೆಯಿಂದ ಆಗಮಿಸುವ ಅಭ್ಯರ್ಥಿಗಳಿಗೆ ಕೋಲಾರದ KEB ಸಮುದಾಯ ಭವನ, ಹಾಲಿಸ್ಟರ್ ಸಮುದಾಯ ಭವನ, ಶತಶೃಂಗ ಪೊಲೀಸ್ ಸಮುದಾಯ ಭವನ, ನಚಿಕೇತ ಹಾಸ್ಟೆಲ್ನಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಡಿಸಿ ಅಕ್ರಂ ಪಾಷಾ ಅವರು ಕೆಪಿಎಸ್ಸಿ ಪರೀಕ್ಷಾರ್ಥಿಗಳಿಗೆ ಊಟ, ಕುಡಿಯುವ ನೀರು, ವಸತಿ ವ್ಯವಸ್ಥೆ ಮೇಲ್ವಿಚಾರಣೆಗೆ ಅಧಿಕಾರಿಗಳನ್ನು ನೇಮಿಸಿದ್ದಾರೆ.