ರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಮಿಶ್ರಾ ಆದೇಶ

Ravi Talawar
ರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಮಿಶ್ರಾ ಆದೇಶ
WhatsApp Group Join Now
Telegram Group Join Now

ಬಳ್ಳಾರಿ,ಮೇ 27 ಜಿಲ್ಲೆಯಲ್ಲಿ ಮೇ 28 ರಂದು ನಗರದ 02 ಕೇಂದ್ರಗಳಲ್ಲಿ 2024-25ನೇ ಸಾಲಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರತಿಭಾವಂತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು 6ನೇ ತರಗತಿಗೆ ಅರ್ಹತಾ ಪರೀಕ್ಷೆಯ ಮೂಲಕ ಸೇರ್ಪಡೆ ಮಾಡಲು ಪ್ರವೇಶ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತ 200 ಮೀಟರ್ ಒಳಗಿನ ಆವರಣವನ್ನು ಸಿಆರ್‍ಪಿಸಿ ಕಲಂ 144ರ ಮೇರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.

ನಗರದ ರೇಡಿಯೋ ಪಾರ್ಕ್‍ನ ಸೇಂಟ್ ಜೋಸೆಫ್ (ಬಾಲಕಿಯರ) ಪ್ರೌಢಶಾಲೆ ಮತ್ತು ಸೇಂಟ್ ಜೋಸೆಫ್ (ಬಾಲಕಯರ) ಪ್ರೌಢಶಾಲೆ ಕೇಂದ್ರಗಳಲ್ಲಿ ಪ್ರವೇಶ ಪರೀಕ್ಷೆಗಳು ಬೆಳಿಗ್ಗೆ 09.30 ಗಂಟೆಯಿಂದ ಮಧ್ಯಾಹ್ನ 02 ಗಂಟೆಯವರೆಗೆ ನಡೆಯಲಿವೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಒಳಗಿನ ಆವರಣವನ್ನು ನಿಬರ್ಂಧಿತ ಪ್ರದೇಶವೆಂದು ಘೋಷಿಸಿದ್ದಾರೆ.

ಅನಧೀಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶವನ್ನು ನಿμÉೀಧಿಸಿದೆ ಹಾಗೂ ಬೆಳಿಗ್ಗೆ 08 ರಿಂದ ಮಧ್ಯಾಹ್ನ 03 ರ ವರೆಗೆ ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತಲಿನ ಝೆರಾಕ್ಸ್ ಅಂಗಡಿಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಆದೇಶದಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article