ಬಳ್ಳಾರಿ,ಮೇ 17: ನಗರದ ಕೋಟೆ ಪ್ರದೇಶದ ಸೇಂಟ್ ಜಾನ್ಸ್ ಪ್ರೌಢ ಶಾಲೆ ಪರೀಕ್ಷಾ ಕೇಂದ್ರದಲ್ಲಿ ಮೇ 20 ರಿಂದ 29 ರ ವರೆಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ಕರ್ನಾಟಕ ಮುಕ್ತ ಶಾಲೆ-ಕೆಓಎಸ್ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಆವರಣವನ್ನು ಸಿಆರ್‍ಪಿಸಿ ಕಲಂ 144 ಮೇರೆಗೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.
ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತ ಬೆಳಿಗ್ಗೆ 09 ಗಂಟೆಯಿಂದ ಮಧ್ಯಾಹ್ನ 1.30 ರವರೆಗೆ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‍ನೆಟ್ ಸೆಂಟರ್‍ಗಳನ್ನು ಕಾರ್ಯನಿರ್ವಹಿಸದಂತೆ ಆದೇಶಿಸಿದ್ದು, ಸದರಿ ಪ್ರದೇಶದಲ್ಲಿ ಅನಧೀಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ.
ಈ ಆದೇಶವು ಪರೀಕ್ಷಾ ಕಾರ್ಯ ನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.