ಬೆಂಗಳೂರು, ಏಪ್ರಿಲ್ 15: ಎರಡೂವರೆ ವರ್ಷಗಳ ನಂತರ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಕುರ್ಚಿ ಬಿಟ್ಟುಕೊಡುವ ಕುರಿತು ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆ ನಡೆಯುತ್ತಿದ್ದು, ಈ ಹೊತ್ತಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿಕೆ ತೀವ್ರ ಚರ್ಚೆಗೆ ಕಾರಣವಾಗಿದೆ.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿದ್ದು, ಅದು ಪಕ್ಷದ ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. . ಅದೆಲ್ಲಾ ಹೈಕಮಾಂಡ್ ನಿರ್ಧಾರವನ್ನು ಅವಲಂಬಿಸಿರುತ್ತದೆ. ಹೈಕಮಾಂಡ್ ನಿರ್ಧರಿಸಿದರೆ ನಾನೇ ಮುಂದುವರಿಯುತ್ತೇನೆ. ಇಲ್ಲವಾದಲ್ಲಿ ಹೈಕಮಾಂಡ್ ನಿರ್ಧಾರದಂತೆ ನಡೆಯುತ್ತೇನೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಇನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮತ್ತೆ ಮುಖ್ಯಮಂತ್ರಿ ಆಗುವ ಆಸೆ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ಏನು ಆಗಬೇಕೋ ಎಲ್ಲಾವೂ ತೀರ್ಮಾನವಾಗಿದೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿಯಾಗುವ ಸುಳಿವುವನ್ನ ಡಿ ಕೆ ಶಿವಕುಮಾರ್ ನೀಡಿದ್ದಾರೆ.
ಮುಖ್ಯಮಂತ್ರಿಯಾಗುವ ಬಯಕೆಯನ್ನು ಮತ್ತೊಮ್ಮೆ ಪರೋಕ್ಷವಾಗಿ ಹೊರಹಾಕಿದ ಶಿವಕುಮಾರ್ ತಮ್ಮ ಸರ್ಕಾರ ಈ ಅವಧಿಗೆ ಮಾತ್ರ ಅಲ್ಲ ಮುಂದಿನ 5-ವರ್ಷದ ಅವಧಿಗೂ ಅಧಿಕಾರದಲ್ಲಿರುತ್ತದೆ ಎಂದರು