ಬೆಂಗಳೂರು, ಜನವರಿ 16: ಕರ್ನಾಟಕ ಕಾಂಗ್ರೆಸ್ನಲ್ಲಿ ಮತ್ತೆ ಭುಗಿಲೆದ್ದಿರುವ ನಾಯಕತ್ವ ಬದಲಾವಣೆ ವಿಚಾರವಾಗಿ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಹೊಸ ದಾಳ ಉರುಳಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಅಧ್ಯಕ್ಷ ಸ್ಥಾನದ ವಿಚಾರ ಸ್ಪಷ್ಟಪಡಿಸಬೇಕಾಗಿರುವುದು ನಾನಲ್ಲ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೇಳಲಿ. ಇವರು (ಅಹಿಂದ ನಾಯಕರು) ಪ್ರಶ್ನೆ ಮಾಡುತ್ತಿರುವುದು ನನ್ನನ್ನಲ್ಲ, ಖರ್ಗೆ ಅವರನ್ನು ಎಂದಿದ್ದಾರೆ.
ಮಹಾತ್ಮ ಗಾಂಧಿಯೇ ಎಲ್ಲವನ್ನೂ ತ್ಯಾಗ ಮಾಡಿದರು. ಅವರು ಮನಸ್ಸು ಮಾಡಿದ್ದರೆ ಪ್ರಧಾನಿ ಆಗುತ್ತಿರಲಿಲ್ಲವೇ ಎಂದು ಡಿಕೆ ಶಿವಕುಮಾರ್ ಪ್ರಶ್ನೆ ಮಾಡಿದರು.