ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ: ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

Ravi Talawar
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ: ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
WhatsApp Group Join Now
Telegram Group Join Now


ಬಳ್ಳಾರಿ,ಜೂ.05:ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಸೇವಾ ಸಿಂಧು ಆನ್ ಲೈನ್ ಮೂಲಕ ಅರ್ಜಿ  ಆಹ್ವಾನಿಸಲಾಗಿದೆ.
ಯೋಜನೆಗಳು:
ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರö್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆ.
ಈ ಮೇಲ್ಕಂಡ ಯೋಜನೆಗಳು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳಿಗೆ ಮಾತ್ರ ಅನ್ವಯವಾಗುತ್ತದೆ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ,  ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ).
ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.
ಒAದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
2023-24 ಮತ್ತು 2024-25ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಅರ್ಹ ಹಿಂದುಳಿದ ವರ್ಗದವರು ಅರ್ಜಿಗಳನ್ನು ಆನ್‌ಲೈನ್ ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಸಲ್ಲಿಸಬಹುದು. ಮಾಹಿತಿಗಾಗಿ ನಿಗಮದ ವೆಬ್ ಸೈಟ್ www.dbcdc.karnataka.gov.in ಗೆ ಸಂಪರ್ಕಿಸಬಹುದು. ಜೂ.30 ಅರ್ಜಿ ಸಲ್ಲಿಸಲು ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನ ಕಚೇರಿಯ ಎರಡನೇ ಮಹಡಿಯ ಬಿ ಬ್ಲಾಕ್ ನ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಕಚೇರಿ ಅಥವಾ ಸಹಾಯವಾಣಿ ಸಂಖ್ಯೆ:08392-267038 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಟಿ.ಹೊನ್ನುರಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article