ಮಂಗಳೂರು, ಅ.07: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸೋದರ ಮುಮ್ತಾಜ್ ಅಲಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಸತತ 28 ಗಂಟೆಗಳ ಕಾರ್ಯಾಚರಣೆ ಬಳಿಕ ಇದೀಗ ಮುಮ್ತಾಜ್ ಅಲಿ ಮೃತದೇಹ ಪತ್ತೆಯಾಗಿದೆ. ಮಂಗಳೂರಿನ ಕೂಳೂರಿನ ಸೇತುವೆ ಬಳಿ ಮುಮ್ತಾಜ್ ಅಲಿ ಶವ ಪತ್ತೆಯಾಗಿದೆ. ಮುಳುಗು ತಜ್ಞರು ಮೃತದೇಹವನ್ನು ಹೊರತೆಗೆದಿದ್ದು ಮೃತದೇಹ ಕಂಡು ಮಾಜಿ ಶಾಸಕ ಮೊಯಿದ್ದೀನ್ ಬಾವಾ ಕಣ್ಣೀರು ಹಾಕಿದ್ದಾರೆ.
ಸಹೋದರನನ್ನ ನೆನೆದು ಮಾಜಿ ಶಾಸಕ ಮೊಯಿದ್ದೀನ್ ಬಾವ ಕಣ್ಣೀರು ಹಾಕಿದ್ದಾರೆ. ಬ್ಲಾಕ್ ಮೇಲ್ ನಿಂದಲೇ ನನ್ನ ಸಹೋದರ ಈ ನಿರ್ಧಾರಕ್ಕೆ ಬಂದಿದ್ದಾನೆ. ನನ್ನ ಸಹೋದರ ಶೈಕ್ಷಣಿಕವಾಗಿ, ಧಾರ್ಮಿಕ ಕಾರ್ಯಗಳಿಂದ ಹೆಸರು ಗಳಿಸಿದ್ದ. ಆತನ ಪ್ರಚಾರವನ್ನ ಸಹಿಸದ ಕೆಲವು ಶಕ್ತಿಗಳು ಕುತಂತ್ರ ಮಾಡಿದ್ದಾರೆ. ಈ ಕಾರಣದಿಂದಲೇ ನನ್ನ ಸಹೋದರ ಈ ನಿರ್ಧಾರಕ್ಕೆ ಬಂದಿದ್ದಾನೆ. ಆತನ ಫೋನ್ ಹಾಗೂ ವಾಟ್ಸ್ ಅಪ್ ಪರಿಶೀಲನೆ ಮಾಡುತ್ತಿದ್ದಾರೆ. ನನ್ನ ಸಹೋದರನ ಈ ಸ್ಥಿತಿಗೆ ಕಾರಣರಾದವರಿಗೆ ತಕ್ಕ ಶಿಕ್ಷೆಯಾಗಲಿ ಎಂದು ಕಣ್ಣೀರು ಹಾಕಿದ್ದಾರೆ.