ವಿದ್ಯುತ್ ಸ್ಪರ್ಶದಿಂದ ವನ್ಯ ಜೀವಿಗಳ ಸಾವು: ಹೈಕೊರ್ಟ್ ಸ್ವಯಂಪ್ರೇರಿತ ಕೇಸ್ ಫೈಲ್

Ravi Talawar
ವಿದ್ಯುತ್ ಸ್ಪರ್ಶದಿಂದ ವನ್ಯ ಜೀವಿಗಳ ಸಾವು: ಹೈಕೊರ್ಟ್ ಸ್ವಯಂಪ್ರೇರಿತ ಕೇಸ್ ಫೈಲ್
WhatsApp Group Join Now
Telegram Group Join Now

ಬೆಂಗಳೂರು: ಆನೆಗಳು ಸೇರಿದಂತೆ ವನ್ಯ ಜೀವಿಗಳು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ಈ ಸಂಬಂಧ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ. ಮಾಧ್ಯಮಗಳಲ್ಲಿ ಪ್ರಕಟವಾದ ವರದಿಯ ಆಧಾರದ ಮೇಲೆ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ಪೀಠ ಈ ಪ್ರಕರಣ ಸಂಬಂಧ ಅರ್ಜಿ ದಾಖಲಿಸಿದೆ.

ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ಹೈಕೋರ್ಟ್​, ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದೆ. ಅಲ್ಲದೆ, ಈ ಸಂಬಂಧ ಮುಂದಿನ ವಿಚಾರಣೆ ವೇಳೆ ಲಿಖಿತ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿ ವಿಚಾರಣೆಯನ್ನು ಜುಲೈ 2ಕ್ಕೆ ಮುಂದೂಡಿದೆ.

ರಾಜ್ಯದ ವನ್ಯಜೀವಿ ಧಾಮಗಳು ಸೇರಿದಂತೆ ವಿವಿಧ ಭಾಗಗಳಲ್ಲಿ ಆನೆಗಳು ಸೇರಿದಂತೆ ಇತರೆ ವನ್ಯಜೀವಿಗಳು ಅಸ್ವಾಭಾವಿಕ ಸಾವು ಗಂಭೀರವಾಗಿದೆ. ಘಟನೆ ಕುರಿತಂತೆ ಯಾವುದೇ ಎಚ್ಚರಿಕಾ ಕ್ರಮಗಳು ಇಲ್ಲವಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯವೇ ಈ ಘಟನೆಗಳಿಗೆ ಕಾರಣವಾಗಿದೆ. ವನ್ಯಜೀವಿಧಾಮ ಮತ್ತು ರಕ್ಷಿತಾರಣ್ಯಗಳು ಮಾತ್ರವಲ್ಲದೆ, ಇತರೆ ಭಾಗಗಳಲ್ಲಿಯೂ ಆನೆಗಳು ಸೇರಿದಂತೆ ವನ್ಯಜೀವಿಗಳ ರಕ್ಷಣ ಮಾಡಬೇಕಾಗಿದೆ.

ಅಶ್ವತ್ಥಾಮ ಎಂಬ ಆನೆ ಮೈಸೂರಿನಲ್ಲಿ ಸಾವಿಗೀಡಾಗಿತ್ತು. ಅಲ್ಲದೆ, ಚಿಕ್ಕಮಗಳೂರಿನಲ್ಲಿ ಮತ್ತೊಂದು ಆನೆ ಹಾಗೂ ಮಡಿಕೇರಿಯಲ್ಲಿ ಎರಡು ಆನೆಗಳು ಸಾವಿಗೀಡಾಗಿದ್ದವು. ರಾಜ್ಯದಲ್ಲಿ ವಿದ್ಯುತ್ ಸ್ಪರ್ಶ ಮತ್ತು ಅಸ್ವಭಾವಿಕ ಕಾರಣಗಳಿಂದ ವನ್ಯಜೀವಿಗಳು ಸಾವನ್ನಪ್ಪುತ್ತಿವೆ. ಈ ಅಂಶ ಮತ್ತು ಮಾಧ್ಯಮಗಳ ವರದಿಗಳು ಪ್ರಕಾರ ಅಧಿಕಾರಿಗಳ ನಿಲರ್ಕ್ಷವೇ ಮತ್ತು ಎಚ್ಚರಿಕೆ ವಹಿಸದಿರುವುದೇ ಕಾರಣವಾಗಿದೆ.

WhatsApp Group Join Now
Telegram Group Join Now
Share This Article