ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಘಟನೆಯಲ್ಲಿ ಅಯ್ಯಪ್ಪ ಮಾಲಾಧಾರಿಗಳ ಸಾವಿನ ಸಂಖ್ಯೆ 8ಕ್ಕೆ ಏರಿಕೆ

Ravi Talawar
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಘಟನೆಯಲ್ಲಿ ಅಯ್ಯಪ್ಪ ಮಾಲಾಧಾರಿಗಳ ಸಾವಿನ ಸಂಖ್ಯೆ 8ಕ್ಕೆ ಏರಿಕೆ
WhatsApp Group Join Now
Telegram Group Join Now

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಅಗ್ನಿ ಅವಘಡದಿಂದ ಗಂಭೀರ ಗಾಯಗೊಂಡಿದ್ದ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಮೃತಪಟ್ಟಿದ್ದಾರೆ. ಪ್ರಕಾಶ ಬಾರಕೇರ (42) ಕಿಮ್ಸ್​​ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಇದರೊಂದಿಗೆ, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಮೃತ ಪ್ರಕಾಶ ಬಾರಕೇರ, ಹುಬ್ಬಳ್ಳಿಯ ಉಣಕಲ್ ನಿವಾಸಿಯಾಗಿದ್ದಾರೆ.

ಸೋಮವಾರ ರಾತ್ರಿಯಷ್ಟೇ ಅಯ್ಯಪ್ಪ ಮಾಲಾಧಾರಿ ತೇಜಸ್ವರ್ (27)​​ ಮೃತಪಟ್ಟಿದ್ದರು. ಇದೀಗ 9 ಗಾಯಾಳುಗಳ ಪೈಕಿ 8 ಅಯ್ಯಪ್ಪ ಮಾಲಾಧಾರಿಗಳ ಸಾವಾಗಿದ್ದು, ಪ್ರಕಾಶ್ ಬಾರಕೇರ ಅವರ ಮಗ ವಿನಾಯಕ್ ಕಿಮ್ಸ್ ನಲ್ಲಿಚಿಕಿತ್ಸ ಮುಂದುವರಿದಿದೆ. ಸದ್ಯಕ್ಕೆ ಆರೋಗ್ಯ ಸ್ಥಿರವಾಗಿದೆ.

ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯ ಅಯ್ಯಪ್ಪನ ಸನ್ನಿಧಿಯಲ್ಲಿ ಸಂಭವಿಸಿದ್ದ ಭೀಕರ ಸಿಲಿಂಡರ್ ಸ್ಫೋಟದಲ್ಲಿ 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡು ಕಿಮ್ಸ್​ ಆಸ್ಪತ್ರೆ ಸೇರಿದ್ದರು. ತಜ್ಞ ವೈದ್ಯರಿಂದ ಚಿಕಿತ್ಸೆ ಕೊಡಿಸಿದರೂ ಗಾಯಾಳುಗಳನ್ನು ಉಳಿಸಿಕೊಳ್ಳಲು ಆಗುತ್ತಿಲ್ಲ. ಸಾವಿನ ಸರಣಿ ಮುಂದುವರಿದಿದ್ದು ಸೋಮವಾರ ರಾತ್ರಿ ರಾಮನಗರ ನಿವಾಸಿ 26 ವರ್ಷದ ತೇಜಸ್ವರ್ ಸಾತರೆ ಉಸಿರು ಚೆಲ್ಲಿದ್ದಾರೆ. ಮೃತ ತೇಸಜ್ವರ್ 3 ವರ್ಷದಿಂದ ಅಯ್ಯಪ್ಪ ಸ್ವಾಮಿ ಮಾಲೆ ಹಾಕುತ್ತಿದ್ದರು ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ 9 ಜನ ಮಾಲಾಧಾರಿಗಳ ಪೈಕಿ ಇದೀಗ ಒಬ್ಬ ಗಾಯಾಳು ಮಾತ್ರ ಬದುಕುಳಿದಿದ್ದಾರೆ. ಅವರಿಗೆ ಚಿಕಿತ್ಸೆ ಮುಂದುವರಿದಿದೆ.

WhatsApp Group Join Now
Telegram Group Join Now
Share This Article