ಭೂ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 158ಕ್ಕೆ ಏರಿಕೆ: 1,000 ಜನರ ರಕ್ಷಣೆ

Ravi Talawar
ಭೂ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 158ಕ್ಕೆ ಏರಿಕೆ: 1,000 ಜನರ ರಕ್ಷಣೆ
WhatsApp Group Join Now
Telegram Group Join Now

ವಯನಾಡು: ಕೇರಳದ ವಯನಾಡಿನಲ್ಲಿ ಸಂಭವಿಸಿರುವ ವಿನಾಶಕಾರಿ ಭೂ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ಬುಧವಾರ 158ಕ್ಕೆ ಏರಿಕೆಯಾಗಿದೆ. 211 ಜನರು ನಾಪತ್ತೆ ಕುರಿತು ವರದಿಯಾಗಿದೆ. ನೂರಾರು ಜನರು ಗಾಯಗೊಂಡಿದ್ದು, ಸಾವಿರಾರು ಜನರನ್ನು ಬೇರೆಡೆ ಸ್ಥಳಾಂತರಿಸಲಾಗಿದೆ. ನೂರಾರು ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದು, ಉಳಿದಿರುವವರ ರಕ್ಷಣೆಗಾಗಿ ರಕ್ಷಣಾ ತಂಡಗಳು ಕಾರ್ಯಾಚರಣೆಯನ್ನು ಇಂದು ಬೆಳಗ್ಗೆಯಿಂದ ಪುನರಾರಂಭಿಸಿವೆ. ಕಗ್ಗತ್ತಲು ಹಾಗೂ ಹವಾಮಾನ ವೈಫರೀತ್ಯದಿಂದಾಗಿ ಮಂಗಳವಾರ ತಡರಾತ್ರಿಯಿಂದ ರಕ್ಷಣಾ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು.

ಸೇನಾ ಸಿಬ್ಬಂದಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಇದುವರೆಗೆ ಸುಮಾರು 70 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಸುಮಾರು 1,000 ಜನರನ್ನು ರಕ್ಷಿಸಲಾಗಿದೆ ಎಂದು ಸೇನೆ ಹೇಳಿದೆ. ಸಂತ್ರಸ್ತರಿಗೆ ನಿರ್ಣಾಯಕ ನೆರವು ನೀಡಲು ಹಲವಾರು ರಕ್ಷಣಾ ತಂಡಗಳು ಒಟ್ಟಾಗಿ ಕೆಲಸ ಮಾಡುತ್ತಿವೆ. ಸೇನೆ, ನೌಕಾಪಡೆ ಮತ್ತು ಎನ್‌ಡಿಆರ್‌ಎಫ್‌ ಸಿಬ್ಬಂದಿ ಭೂಕುಸಿತದಿಂದ ಬದುಕುಳಿದವರಿಗಾಗಿ ಕುಸಿದ ಮೇಲ್ಛಾವಣಿ ಮತ್ತು ಅವಶೇಷಗಳಡಿಯಲ್ಲಿ ಹುಡುಕುತ್ತಿದ್ದಾರೆ.

WhatsApp Group Join Now
Telegram Group Join Now
Share This Article