ಡಿ.ದೇವರಾಜು ಅರಸುರವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸಲು ಪೂರ್ವಭಾವಿ ಸಭೆಯಲ್ಲಿ ನಿರ್ಧಾರ

Pratibha Boi
ಡಿ.ದೇವರಾಜು ಅರಸುರವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸಲು ಪೂರ್ವಭಾವಿ ಸಭೆಯಲ್ಲಿ ನಿರ್ಧಾರ
WhatsApp Group Join Now
Telegram Group Join Now

ಬಳ್ಳಾರಿ,ಆ.08 ಜಿಲ್ಲಾ ಕೇಂದ್ರದಲ್ಲಿ ಆ.20 ರಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಭೇರ್ ಅವರು ಹೇಳಿದರು.
ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಡಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಗರದ ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ವೇದಿಕೆ ಕಾರ್ಯಕ್ರಮವು ಸುವ್ಯಸ್ಥಿತವಾಗಿ ನಡೆಯುವಂತಾಗಬೇಕು. ಜಯಂತಿ ಹಿನ್ನೆಲೆಯಲ್ಲಿ ರಂಗಮAದಿರದ ಹೊರಾಂಗಣ ಮತ್ತು ಒಳಾಂಗಣದಲ್ಲಿ ಶುಚಿತ್ವ ಕಾಯ್ದುಕೊಳ್ಳಬೇಕು. ಆಹ್ವಾನ ಪತ್ರಿಕೆಗಳ ಮುದ್ರಣ ಮಾಡುವ ಕುರಿತು ಹಾಗೂ ಶಿಷ್ಠಾಚಾರ ಪಾಲನೆ ಮಾಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ದೇವರಾಜು ಅರಸು ಅವರ ಜಯಂತಿ ಪ್ರಯುಕ್ತ ಆ.20 ರಂದು ಎಲ್ಲಾ ಸರ್ಕಾರಿ ಶಾಲಾ ಕಾಲೇಜು ಮತ್ತು ಕಚೇರಿಗಳಲ್ಲಿ ಅರಸು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಿ ಜಯಂತಿ ಕಾರ್ಯಕ್ರಮವನ್ನು ಎಲ್ಲೆಡೆಯೂ ಆಚರಿಸಬೇಕು ಎಂದು ತಿಳಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರ ಕಚೇರಿಯಿಂದ ಬಂದ ಸುತ್ತೋಲೆಯಲ್ಲಿ ತಿಳಿಸಿದಂತೆ ಡಿ.ದೇವರಾಜು ಅವರ ಜನ್ಮ ದಿನಾಚರಣೆಯನ್ನು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯಗಳಲ್ಲಿ ಆ.20 ರಂದು ಕಡ್ಡಾಯವಾಗಿ ಆಚರಿಸಲು ಕ್ರಮ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು, ಬಿಸಿಎಂ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಚನೆ ನೀಡಿದರು.
ಡಿ.ದೇವರಾಜ ಅರಸು ಅವರ ವ್ಯಕ್ತಿತ್ವದ ಬಗ್ಗೆ ಇಂದಿನ ಯುವ ಸಮುದಾಯಕ್ಕೆ ಸಂದೇಶ ಸಾರುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿನ ವಿವಿಧ ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ಭಾಷಣ ಸ್ಪರ್ಧೆ ಹಾಗೂ ಇನ್ನೀತರ ಸ್ಪರ್ಧೆಗಳನ್ನು ಆಯೋಜನೆ ಮಾಡಿ ಬಹುಮಾನ ವಿತರಣೆಗೆ ಕ್ರಮ ವಹಿಸಬೇಕು ಎಂದರು.
ಪ್ರಸಕ್ತ ಸಾಲಿನಲ್ಲಿ ಎಸೆಸೆಲ್ಸಿ, ಪಿಯುಸಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಬಿಸಿಎಂ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳನ್ನು ಗುರುತಿಸಿ ವೇದಿಕೆಯಲ್ಲಿ ಸನ್ಮಾನಿಸಿ ಗೌರವಿಸಬೇಕು. ಹಿಂದುಳಿದ ಸಮುದಾಯಗಳ ಒಕ್ಕೂಟದ ಗಣ್ಯರಿಗೆ ವೇದಿಕೆಗೆ ಅವಕಾಶ ಕಲ್ಪಿಸಿಕೊಡಬೇಕು. ಉತ್ತಮ ಸಂಪನ್ಮೂಲ ವ್ಯಕ್ತಿಗಳಿಂದ ಡಿ.ದೇವರಾಜು ಅರಸು ಅವರ ಕುರಿತು ವಿಶೇಷ ಉಪನ್ಯಾಸ ಏರ್ಪಡಿಸಬೇಕು ಸಂಬAಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಹಿಂದುಳಿದ ವರ್ಗದ ಸಮುದಾಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ ವ್ಯಕ್ತಿಗಳಿಗೆ ಜಿಲ್ಲಾಮಟ್ಟದ ದೇವರಾಜು ಅರಸು ಪ್ರಶಸಿ ನೀಡಬೇಕು ಎಂದು ಸಭೆಯಲ್ಲಿದ್ದ ವಿವಿಧ ಸಮುದಾಯದ ಮುಖಂಡರು ಸಭೆಗೆ ಮನವಿ ಮಾಡಿದರು. ಇದಕ್ಕೆ ಅಪರ ಜಿಲ್ಲಾಧಿಕಾರಿ ಅವರು ಪ್ರತಿಕ್ರಿಯಿಸಿ ಇದಕ್ಕಾಗಿ ಸಮಿತಿಯನ್ನು ರಚಿಸಿ ಮುಂದಿನ ಕ್ರಮ ವಹಿಸಲಾಗುವುದು ಎಂದರು.
ಸಭೆಯಲ್ಲಿ ಹಾಜರಿದ್ದ ಸಂಘಟನೆಯ ಮುಖಂಡರುಗಳು ಜಿಲ್ಲೆಯಲ್ಲಿ ದೇವರಾಜು ಅರಸು ಸಮುದಾಯ ಭವನ ನಿರ್ಮಾಣಕ್ಕೆ ಜಾಗ ನೀಡುವಂತೆ ಮನವಿ ಮಾಡಿದರು. ಇದಕ್ಕೆ ಅಪರ ಜಿಲ್ಲಾಧಿಕಾರಿ, ಸ್ಥಳ ಗುರುತಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಲಾಲಪ್ಪ, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಜಿಲ್ಲೆಯ ವಿವಿಧ ಸಂಘ-ಸAಸ್ಥೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು

WhatsApp Group Join Now
Telegram Group Join Now
Share This Article