ರುದ್ರಾಕ್ಷಿಮಠದ ಶ್ರೀಗಳಿಂದ  ಮಹಾನ್ ದಾರ್ಶನಿಕ ಬಸವಣ್ಣ ಗ್ರಂಥ  ಲೋಕಾರ್ಪಣೆ

Hasiru Kranti
ರುದ್ರಾಕ್ಷಿಮಠದ ಶ್ರೀಗಳಿಂದ  ಮಹಾನ್ ದಾರ್ಶನಿಕ ಬಸವಣ್ಣ ಗ್ರಂಥ  ಲೋಕಾರ್ಪಣೆ
WhatsApp Group Join Now
Telegram Group Join Now
ಬೈಲಹೊಂಗಲ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಮಹಾಂತ ಮೋಟಾರ್ಸ  ಆವರಣದಲ್ಲಿ  ಕೇಂದ್ರ ಬಸವ ಸಮಿತಿ ಪ್ರಕಟಿಸಿರುವ ಮಹಾನ್ ದಾರ್ಶನಿಕ ಬಸವಣ್ಣ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮ ಜಾಗತಿಕ ಲಿಂಗಾಯತ ಮಹಾಸಭಾದ ಬೈಲಹೊಂಗಲ ನಗರ ಘಟಕದ ಅಧ್ಯಕ್ಷರಾದ ಮಹೇಶ ವೀರಭದ್ರಪ್ಪ ಕೋಟಗಿ (ಉಡಿಕೇರಿ)ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಗ್ರಂಥ ಲೋಕಾರ್ಪಣೆಗೊಳಿಸಿದ ಹುಬ್ಬಳ್ಳಿ-ಬೈಲಹೊಂಗಲ ರುದ್ರಾಕ್ಷಿಮಠದ ಪೂಜ್ಯಶ್ರೀ ಬಸವಲಿಂಗ ಮಹಾಸ್ವಾಮಿಗಳು
 ಮಾತನಾಡಿ ಕೇಂದ್ರ ಬಸವ ಸಮಿತಿ ಪ್ರಕಟಿಸಿರುವ  *ಮಹಾನ್ ದಾರ್ಶನಿಕ  ಬಸವಣ್ಣ* ಗ್ರಂಥ ಬಸವಣ್ಣನವರ ಜನನ, ಕಪ್ಪಡಿ ಸಂಗಮದಲ್ಲಿ ಬಸವಣ್ಣನವರ ವಿದ್ಯಾಭ್ಯಾಸ, ಕಾಯಕ ಜೀವನ, ಕಲ್ಯಾಣದಲ್ಲಿ ಬಸವಣ್ಣನವರ ಸಾಧನೆಗಳು, ಬಸವ ಮಹಾಮನೆ, ಪ್ರಸಾದ- ದಾಸೋಹ, ಅನುಭವ ಮಂಟಪದ ಸ್ಥಾಪನೆ, ಬಸವ ಪೂರ್ವದ ಪರಿಸ್ಥಿತಿ ಹಾಗೂ ನಂತರದ ಸಾಮಾಜಿಕ, ಆರ್ಥಿಕ, ಸಾಹಿತ್ಯಿಕ, ಶೈಕ್ಷಣಿಕ ಪರಿಸ್ಥಿತಿ ವಿವರದೊಡನೆ ಬಸವಣ್ಣನವರ ಘನ ವ್ಯಕ್ತಿತ್ವ ಹಾಗೂ ಜೀವನದ ಘಟನೆಗಳನ್ನು ಒಳಗೊಂಡು ಜನರಿಗೆ ಒಳ್ಳೆಯ ಸಂದೇಶಗಳನ್ನು ತಲುಪಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.
 ಸೋಮೇಶ್ವರ ಸಹಕಾರಿ ಸಕ್ಕರೆ ಕಾರ್ಖಾನೆಯ ನಿರ್ದೇಶಕರಾದ ಶ್ರೀಶೈಲ ಉಳವಪ್ಪ ಶರಣಪ್ಪನವರ ಅವರು ಮಾತನಾಡಿ ಸಕಲ ಜೀವಾತ್ಮರಿಗೆ ಲೇಸನೆ ಬಯಸಿದ ಮಹಾನ್ ಮಾನವತಾವಾದಿ, ಕಲ್ಯಾಣಕ್ಕಾಗಿ ಹಗಲಿರುಳು ಶ್ರಮಿಸಿದ ವಿಶ್ವದ ಯುಗಪುರುಷ ಬಸವಣ್ಣನವರು ಮಹಾ ಮಾನವತಾವಾದಿ, ಸ್ವತಂತ್ರ ವಿಚಾರವಾದಿ, ಸಮತಾವಾದಿ, ದಲಿತೋದ್ಧಾರಕ, ಶ್ರೇಷ್ಠ ಅರ್ಥಶಾಸ್ತ್ರಜ್ಞ, ಸ್ತ್ರೀಕುಲೋದ್ಧಾರಕ, ಪ್ರಾಮಾಣಿಕ ಬದುಕಿನ ಪಾರದರ್ಶಕ ವ್ಯಕ್ತಿತ್ವದ ಮಹಾನ್ ದಾರ್ಶನಿಕರಾಗಿದ್ದರು. ಇಂದಿನ ಸಮಾಜದಲ್ಲಿ ಇಂತಹ ಕಲ್ಪನೆ ಬಿತ್ತುವುದು  ನಮ್ಮ ಜವಾಬ್ದಾರಿಯಾಗಿದೆ ಎಂದರು.
ಕನ್ನಡ ಜಾನಪದ ಪರಿಷತ್ತಿನ ಬೈಲಹೊಂಗಲ ತಾಲ್ಲೂಕಿನ ಅಧ್ಯಕ್ಷರಾದ ಚಂದ್ರಶೇಖರ ರುದ್ರಪ್ಪ ಕೊಪ್ಪದ ಅವರು ಮಾತನಾಡಿ ಕೇಂದ್ರ ಬಸವ ಸಮಿತಿಯು  ಶಾಲೆಯಿಂದ ಶಾಲೆಗೆ, ಕಾಲೇಜಿನಿಂದ ಕಾಲೇಜಿಗೆ  ವಚನಕಾರರು ಮತ್ತು ವ್ಯಕ್ತಿತ್ವ ವಿಕಸನ ಕಾರ್ಯಕ್ರಮವನ್ನು ಹಮ್ಮಿಕೊಂಡು ಲಕ್ಷಾಂತರ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನವಾಗಿದೆ ಎಂದು ಹೇಳಿದರು.
  ಕೇಂದ್ರ ಬಸವ ಸಮಿತಿಯ  ಕಾರ್ಯಕಾರಿ ಸಮಿತಿಯ ಹಿರಿಯ ಸದಸ್ಯರು ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲೆಯ ಮಾಜಿ ಅಧ್ಯಕ್ಷರಾದ ಮೋಹನ ಬಸನಗೌಡ ಪಾಟೀಲ ಅವರು ಪ್ರಾಸ್ತಾವಿಕ ಭಾಷಣ ಮಾಡಿದರು.
ನಗರ ಸಭೆಯ ಮಾಜಿ ಸದಸ್ಯರಾದ ಬಸವರಾಜ ಶಿಂತ್ರಿ ಸ್ವಾಗತಿಸಿದರು, ಶ್ರೀಕಾಂತ ನಿಕ್ಕಂ ವಂದಿಸಿದರು.
WhatsApp Group Join Now
Telegram Group Join Now
Share This Article