ನವದೆಹಲಿ, ಅಕ್ಟೋಬರ್ 11: ದೆಹಲಿ ಸರ್ಕಾರವು ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಮಾರಾಟವನ್ನು ನಿಷೇಧಿಸಿದೆ. ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಸೇವಿಸಿ 20 ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ ಬಳಿಕ ದೆಹಲಿ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ದೆಹಲಿಯಲ್ಲಿ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಅನ್ನು ಸರ್ಕಾರ ನಿಷೇಧಿಸಿದೆ. ಇದರರ್ಥ ರಾಜಧಾನಿಯಲ್ಲಿ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಮಾರಾಟ ಮತ್ತು ಖರೀದಿಯನ್ನು ಈಗ ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಮಕ್ಕಳಿಗೆ ನೆಗಡಿ, ಕೆಮ್ಮು ಕಾಣಿಸಿಕೊಂಡ ಬಳಿಕ ಪೋಷಕರು ಅವರನ್ನು ವೈದ್ಯರ ಬಳಿಗೆ ಕರೆದೊಯ್ದಿದ್ದರು, ವೈದ್ಯರು ಕೋಲ್ಡ್ರಿಫ್ ಸಿರಪ್ ಅನ್ನು ನೀಡಿದ್ದರು. ಅದನ್ನು ಸೇವಿಸಿದ ಬಳಿಕ ಆರೋಗ್ಯ ಮತ್ತಷ್ಟು ಹದಗೆಟ್ಟಿತ್ತು. 20 ಮಕ್ಕಳು ಇದುವರೆಗೆ ಪ್ರಾಣ ಕಳೆದುಕೊಂಡಿದ್ದಾರೆ.