ಬೆಳಗಾವಿ: ನವದೆಹಲಿಯಲ್ಲಿ ಕೇಂದ್ರ ವಿಮಾನಯಾನ ಸಚಿವರಾದ ಕಿಂಜರಾಪು ರಾಮಮೋಹನ್ ನಾಯ್ಡು ಅವರನ್ನು ಕಿತ್ತೂರು ಕರ್ನಾಟಕ ನಿಯೋಗದೊಂದಿಗೆ ಭೇಟಿಯಾಗಿ ಕಿತ್ತೂರು ರಾಣಿ ಚೆನ್ನಮ್ಮ ಅವರ 200ನೇ ವರ್ಷಾಚರಣೆ ನಿಮಿತ್ಯ ಬೆಳಗಾವಿ ವಿಮಾನ ನಿಲ್ದಾಣಕ್ಕೆ “ಕಿತ್ತೂರು ರಾಣಿ ಚೆನ್ನಮ್ಮ ವಿಮಾನ ನಿಲ್ದಾಣ’’ ಎಂದು ನಾಮಕರಣ ಹಾಗೂ ವಿಮಾನ ನಿಲ್ದಾಣದ ಮುಂಭಾಗದಲ್ಲಿ ಚನ್ನಮ್ಮನ ಭವ್ಯವಾದ ಪ್ರತಿಮೆ ಸ್ಥಾಪನೆ ಮಾಡುವಂತೆ ವಿನಂತಿಸಲಾಯಿತು.
ಜೊತೆಗೆ ಬೆಳಗಾವಿ- ಬೆಂಗಳೂರು ವಿಮಾನಯಾನ ಸೇವೆ ರದ್ದು ಮಾಡದೇ ಮುಂದುವರೆಸುವುದು, ಪುಣೆ, ಚೆನ್ನೈ ಕೊಚ್ಚಿನ್, ಲಖನೌ, ಮೈಸೂರು, ಮುಂಬಯಿ ನಗರಗಳಿಗೂ ಸಹ ವಿಮಾನಯಾನ ಸೇವೆಯನ್ನು ಒದಗಿಸುವಂತೆ ಸಚಿವರಿಗೆ ಆಗ್ರಹಪೂರ್ವಕ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಸಂಸದರಾದ, ವಿಶ್ವೇಶ್ವರ ಹೆಗಡೆ ಕಾಗೇರಿ, ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ,ಮಾಜಿ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ, ಶಾಸಕರಾದ ಅರವಿಂದ ಬೆಲ್ಲದ, ಅಭಯ ಪಾಟೀಲ, ಮಾಜಿ ಶಾಸಕರು ಹಾಗೂ ಬಿಡಿಸಿಸಿ ಬ್ಯಾಂಕ ನಿರ್ದೇಶಕರಾದ ಮಹಾಂತೇಶ ದೊಡ್ಡಗೌಡರ, ಡಾ. ವಿ.ಆಯ್. ಪಾಟೀಲ. ಡಾ. ರವಿ ಪಾಟೀಲ, ಮಲ್ಲಣ್ಣ ಯಾದವಾಡ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.