ಚಿಕ್ಕಮಗಳೂರು, ಜೂನ್.19: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಡೆಂಗ್ಯೂ ಕೇಸ್ಗಳು ಉಲ್ಬಣಗೊಂಡಿವೆ. ಚಿಕ್ಕಮಗಳೂರು ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ನೂರಾರು ರೋಗಿಗಳು ಸಾಲುಗಟ್ಟಿ ನಿಂತಿದ್ದಾರೆ. ನೂರಾರು ಸಂಖ್ಯೆಯಲ್ಲಿ ಡೆಂಗ್ಯೂ ರೋಗಿಗಳು ಚಿಕಿತ್ಸೆಗೆ ಆಗಮಿಸಿದ್ದಾರೆ. ಒಳ ರೋಗಿಗಳ ವಾರ್ಡ್ ಸಂಪೂರ್ಣ ಭರ್ತಿಯಾಗಿದೆ.
ಇದೇ ಮೊದಲ ಬಾರಿಗೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿವೆ. ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ಉಸ್ತುವಾರಿ ಸಚಿವ ಕೆ.ಜೆ ಜಾರ್ಜ್ ಭೇಟಿ ನೀಡಿ ಡೆಂಗ್ಯೂ ರೋಗಿಗಳ ಆರೋಗ್ಯ ವಿಚಾರಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಡೆಂಗ್ಯೂ ಹೆಚ್ಚಳ ಹಿನ್ನೆಲೆ DHO ಸೇರಿದಂತೆ ವೈದ್ಯರ ಜೊತೆ ಕೆ.ಜೆ ಜಾರ್ಜ್ ಸಭೆ ನಡೆಸಿದ್ದಾರೆ.
ಕಳೆದ 15 ದಿನಗಳಲ್ಲಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಒಟ್ಟು ಸಾವಿರಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಓರ್ವ ವ್ಯಕ್ತಿ ಡೆಂಗ್ಯೂನಿಂದ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.