ಮೀನುಗಾರಿಕೆ ಇಲಾಖೆ: ನಾಲ್ಕು ಚಕ್ರ ವಾಹನ ಖರೀದಿಗೆ ಅರ್ಜಿ ಆಹ್ವಾನ

Ravi Talawar
ಮೀನುಗಾರಿಕೆ ಇಲಾಖೆ: ನಾಲ್ಕು ಚಕ್ರ ವಾಹನ ಖರೀದಿಗೆ ಅರ್ಜಿ ಆಹ್ವಾನ
WhatsApp Group Join Now
Telegram Group Join Now


ಬಳ್ಳಾರಿ,ಸೆ.05:  ಮೀನುಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ ನಾಲ್ಕು ಚಕ್ರ ವಾಹನ ಖರೀದಿಸಲು ಸಹಾಯಧನ ಪಡೆಯಲು ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ 02 ಮತ್ತು ಪರಿಶಿಷ್ಟ ಪಂಗಡದ 01 ಮೀನುಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಗುರಿ ನಿಗದಿಪಡಿಸಲಾಗಿದ್ದು, ಖರೀದಿಸಿದ ವಾಹನಕ್ಕೆ ಶೇ.50ರಷ್ಟು ಅಥವಾ ಗರಿಷ್ಟ 3 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲಾಗುವುದು. ಅರ್ಜಿಯನ್ನು ಸೆಪ್ಟಂಬರ್ 20 ರೊಳಗಾಗಿ ಜಿಲ್ಲೆಯ ಆಯಾ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ, ಸಿರುಗುಪ್ಪ, ಕಂಪ್ಲಿ, ಕುರುಗೋಡು ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಮೊ.7406508971 ಹಾಗೂ ಸಂಡೂರಿನ  ಮೀನುಗಾರಿಕೆ ಸಹಾಯಕ ನಿರ್ದೇಶಕರ ಮೊ.7204911897 ಗೆ ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article