ಧಾರವಾಡ : ತಾಲೂಕಿನ ಸಲಕಿನಕೊಪ್ಪ ಹದ್ದಿನ ಸಣ್ಣ ಸೋಮಾಪುರ ಜಮೀನಿನಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅನುಮತಿ ಇಲ್ಲದೆ ಮೊರಂ ಗಣಿಗಾರಿಕೆ ನಡೆಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿ ಮಹೇಶ ಗೌಡನಾಯ್ಕರ ನೇತೃತ್ವದಲ್ಲಿ ಸಿಬ್ಬಂದಿಯೊಂದಿಗೆ ದಾಳಿ ನಡೆಸಲಾಯಿತು.
ಈ ವೇಳೆ ನಾಗೇಶ ಅಣ್ಣಿಗೇರಿ ಹಾಗೂ ಪವನಗೌಡ ಹೊಸೂರ ಎಂಬುವರು ಇಲಾಖೆಯ ಅನುಮತಿ ಇಲ್ಲದೆ ಮೊರಂ ಅಗೆದು ಸಾಗಾಟ ಮಾಡಿರುವುದು ಕಂಡುಬಂದಿತ್ತು. ಮೊರಂ ಸಾಗಿಸಲು ಬಳಸುತ್ತಿದ್ದ 2 ಟಿಪ್ಪರ್ ಹಾಗೂ 3 ಟ್ರ್ಯಾಕ್ಟರ್ಗಳನ್ನು ಜಪ್ತಿ ಮಾಡಿ ಗ್ರಾಮೀಣ ಪೆÇಲೀಸ್ ಠಾಣೆಗೆ ಒಪ್ಪಿಸಲಾಗಿದೆ. ಮತ್ತು ಈ ಕುರಿತು ಭೂಮಾಲೀಕರಿಗೆ ನೋಟಿಸ್ ನೀಡಲಾಗಿದೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.