ಧಾರವಾಡ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಧಾರವಾಡ ಜಿಲ್ಲೆಯ ಐದು ರಾಷ್ಟ್ರೀಯ ಸ್ಮಾರಕ ಟ್ರಸ್ಟಗಳಿಗೆ ಹೊಸದಾಗಿ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಿ, ಸರ್ಕಾರವು ನಿನ್ನೆ ದಿನ ಆದೇಶ ಹೊರಡಿಸಿದೆ.
*ಡಾ, ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ (ರಿ):* ಅಧ್ಯಕ್ಷರಾಗಿ ಪಂ.ಎಂ.ವೆಂಕಟೇಶ ಕುಮಾರ, ಸದಸ್ಯರಾಗಿ ಡಾ. ಶಕ್ತಿ ಪಾಟೀಲ, ಉಸ್ತಾದ್ ಶಫೀಕ್ ಖಾನ್, ಡಾ. ಪರಶುರಾಮ ಕಟ್ಟಿ ಸಂಗಾವಿ, ಡಾ. ಚಂದ್ರಿಕಾ ಕಾಮತ್, ಯಾದವೇಂದ್ರ ಪೂಜಾರ, ಅಕ್ಕಮಹಾದೇವಿ ಆಲೂರ, ಗುರುಪ್ರಸಾದ ಹೆಗಡೆ ಮತ್ತು ಸದಸ್ಯ ಕಾರ್ಯದರ್ಶಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಧಾರವಾಡ ಇವರನ್ನು ನೇಮಿಸಲಾಗಿದೆ.
*ಡಾ. ದ.ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ (ರಿ):* ಅಧ್ಯಕ್ಷ ಡಾ. ಸರಜೂ ಕಾಟ್ಕರ್, ಸದಸ್ಯರಾಗಿ ಡಾ. ವೈ.ಎಂ. ಯಾಕೊಳ್ಳಿ, ಡಾ. ಅಶೋಕ ಶೆಟ್ಟರ, ಶೀಲಾಧರ ಮುಗಳಿ, ಡಾ. ಶರಣಮ್ಮ ಗೊರೆಬಾಳ, ಪ್ರಭು ಕುಂದರಗಿ, ಪುನರ್ವಸು ಪಾಂಡುರಂಗ ಬೇಂದ್ರೆ, ಇಮಾಮಸಾಬ ವಲ್ಲೇಪ್ಪನವರ ಮತ್ತು ಸಹಾಯಕ ನಿರ್ದೇಶಕರು, ಸದಸ್ಯ ಕಾರ್ಯದರ್ಶಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಧಾರವಾಡ ಇವರನ್ನು ನೇಮಿಸಲಾಗಿದೆ.
*ಸ್ವರ ಸಾಮ್ರಾಟ ಪಂ. ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್ (ರಿ):* ಅಧ್ಯಕ್ಷ ಪಂ. ಕೈವಲ್ಯ ಕುಮಾರ ಗುರವ, ಸದಸ್ಯರಾಗಿ ಪಂ. ಸಾತಲಿಂಗಪ್ಪ ಕಲ್ಲೂರ ದೇಸಾಯಿ, ನಿಜಗುಣಿ ರಾಜಗುರು, ಛೋಟಿ ರಹಿಮತ್ ಖಾನ್, ಡಾ. ಅಶೋಕ ಹುಗ್ಗಣ್ಣವರ, ಡಾ. ಅನಿಲ ಮೇತ್ರಿ, ಅಲ್ಲಮಪ್ರಭು ಕಡಕೋಳ, ಸುಪ್ರಿಯಾ ಭಟ್ ಮತ್ತು ಸದಸ್ಯ ಕಾರ್ಯದರ್ಶಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಧಾರವಾಡ ಇವರನ್ನು ನೇಮಿಸಲಾಗಿದೆ.
*ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ (ರಿ):* ಅಧ್ಯಕ್ಷ ಡಾ. ರಂಜಾನ ದರ್ಗಾ, ಸದಸ್ಯರಾಗಿ ಡಾ. ದೀಪಕ ಆಲೂರು, ವಿಶ್ವನಾಥ ಕುಲಕರ್ಣಿ, ಡಾ.ಸಿ.ಯು. ಬೆಳ್ಳಕ್ಕಿ, ಡಾ. ಪ್ರಕಾಶ ಉಡಕೇರಿ, ದೌಪದಿ ವಿಜಾಪುರ, ಬಸವರಾಜ ಸೂಳಿಭಾವಿ, ಸುನಂದಾ ಕಡಮೆ ಮತ್ತು ಸದಸ್ಯ ಕಾರ್ಯದರ್ಶಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಧಾರವಾಡ ಇವರನ್ನು ನೇಮಿಸಲಾಗಿದೆ.
*ಚಿತ್ರಕಲಾ ಶಿಲ್ಪಿ ಶ್ರೀ ಡಿ.ವಿ, ಹಾಲಭಾವಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ (ರಿ):* ಅಧ್ಯಕ್ಷ ಬಿ. ಮಾರುತಿ, ಸದಸ್ಯರಾಗಿ ಸುರೇಶ ಹಾಲಭಾವಿ, ಎಫ್.ವಿ.ಚಿಕ್ಕಮಠ, ಡಿ.ಎಂ. ಬಡಿಗೇರ, ಡಾ.ಬಿ.ಎಲ್.ಚವ್ಹಾಣ, ಡಾ. ಬಿ.ಹೆಚ್. ಕುರಿಯವರ, ಎಸ್.ಕೆ.ಪತ್ತಾರ, ರೇಣುಕಾ ಮಾಕರ್ಂಡಯ್ಯ ಮತ್ತು ಸದಸ್ಯ ಕಾರ್ಯದರ್ಶಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಧಾರವಾಡ ಇವರನ್ನು ನೇಮಕಗೊಳಿಸಿ, ಸರಕಾರ ಆದೇಶ ಹೋರಡಿಸಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಣೆ ತಿಳಿಸಿದೆ.