ಗರ್ಭಿಣಿ ಮಹಿಳೆಯರ ಆರೋಗ್ಯ ತಪಾಸಣೆ ಕಾರ್ಯ ನಿರಂತರವಾಗಿರಲಿ: ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬು

Ravi Talawar
ಗರ್ಭಿಣಿ ಮಹಿಳೆಯರ ಆರೋಗ್ಯ ತಪಾಸಣೆ ಕಾರ್ಯ ನಿರಂತರವಾಗಿರಲಿ: ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬು
WhatsApp Group Join Now
Telegram Group Join Now

ಬಳ್ಳಾರಿ,ನ.14 ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಗರ್ಭಿಣಿ ಮಹಿಳೆಯರ ಆರೋಗ್ಯ ತಪಾಸಣೆ ಕೈಗೊಳ್ಳುವ ಕಾರ್ಯ ನಿರಂತರವಾಗಿರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು.
ಗುರುವಾರ, ಸಿರುಗುಪ್ಪ ತಾಲ್ಲೂಕಿನ ತೆಕ್ಕಲಕೋಟೆಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ಭೇಟಿ ನೀಡಿ ಆಸ್ಪತ್ರೆ ಕಾರ್ಯ ವೈಖರಿ ಕುರಿತು ಮೇಲ್ವಿಚಾರಣೆ ನಡೆಸಿ ಅಲ್ಲಿನ ಪ್ರಸೂತಿ ತಜ್ಞರು ಮತ್ತು ಮಕ್ಕಳ ತಜ್ಞರೊಂದಿಗೆ ಚರ್ಚಿಸಿ ಮಾತನಾಡಿದ ಅವರು, ಗರ್ಭಿಣಿ ಮಹಿಳೆಯರು ಹಾಗು ಮಕ್ಕಳ ಆರೋಗ್ಯ ಸೇವೆಗಳ ನಿರಂತರವಾಗಿರಬೇಕು ಎಂದು ತಿಳಿಸಿದರು.
ಗರ್ಭಿಣಿ ಮಹಿಳೆಯರು ಮತ್ತು ಮಕ್ಕಳ ತಾಯಂದಿರು ಪೌಷ್ಟಿಕ ಆಹಾರ ಸೇವನೆ, ಶಿಶುಗಳ ಆರೈಕೆ, ಎದೆ ಹಾಲುಣಿಸುವಿಕೆ, ಲಸಿಕೆಗಳ ಮಹತ್ವ ಕುರಿತು ಅರಿವು ಹೊಂದಬೇಕು. ಮಕ್ಕಳಲ್ಲಿ ಯಾವುದಾದರೂ ರೋಗಲಕ್ಷಣಗಳು ಕಂಡುಬAದಲ್ಲಿ ತಕ್ಷಣವೇ ಆಸ್ಪತ್ರೆಗೆ ಕರೆತರಬೇಕು. 5 ವರ್ಷದೊಳಗಿನ ಮಕ್ಕಳ ಉಸಿರಾಟ ತೊಂದರೆ ಕಂಡುಬAದಲ್ಲಿ ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆಯ ವೈದ್ಯರ ಬಳಿ ತೆರಳಬೇಕು ಎಂದು ತಿಳಿಸಿದರು.
ಮುಖ್ಯವಾಗಿ ಗಂಡಾAತರ ಗರ್ಭಿಣಿಯರು ಎಂದು ಗುರ್ತಿಸಿದ ಚೊಚ್ಚಲು ಗರ್ಭಿಣಿ, ಎತ್ತರ ಕಡಿಮೆ, ಅಧಿಕ ರಕ್ತದೊತ್ತಡ, ರಕ್ತದಲ್ಲಿ ಕಬ್ಬಿಣಾಂಶ ಕೊರತೆ, ಅವಳಿ-ಜವಳಿ ಗರ್ಭಿಣಿ, ವಿವಾಹವಾಗಿ ಐದಕ್ಕಿಂತ ಹೆಚ್ಚು ವರ್ಷಗಳ ನಂತರ ಗರ್ಭಿಣಿಯಾಗುವುದು, ಮೊದಲ ಹೆರಿಗೆ ಸಿಸೇರಿಯನ್ ಮುಂತಾದ ಕಾರಣಗಳಿದ್ದರೆ ನಿರ್ಲಕ್ಷಿಸಿಸಬಾರದು. ನಿಯಮಿತವಾಗಿ ತಪಾಸಣೆಗೆ ಒಳಗಾಗಬೇಕು ಎಂದು ಸೂಚಿಸಿದರು.
ತೀವ್ರ ರಕ್ತಹೀನತೆಯಂತಹ ಸನ್ನಿವೇಶದಲ್ಲಿ ಸ್ಥಳೀಯವಾಗಿ ನೀಡುವ ಚಿಕಿತ್ಸೆಯಾದ ಐಎಫ್‌ಎ ಮಾತ್ರೆ, ಐರನ್ ಸುಕ್ರೋಸ್, ರಕ್ತ ಹಾಕಿಸುವಿಕೆ ಕೈಗೊಳ್ಳಬೇಕು. ಸುಧಾರಣೆಯಾಗದಿದ್ದಲ್ಲಿ ತಜ್ಞರ ಬಳಿ ತಪ್ಪದೇ ತೆರಳಬೇಕು. ಅಗತ್ಯವಿದ್ದಲ್ಲಿ ಸ್ಕಾö್ಯನ್ ಮಾಡಿಸಬೇಕು. ಮೊದಲ ಹೆರಿಗೆ ಶಸ್ತçಚಿಕಿತ್ಸೆಯಾದಲ್ಲಿ ಪುನಃ ಗರ್ಭಿಣಿಯಾಗುವ ಅವಧಿಯನ್ನು ಕನಿಷ್ಟ 3 ವರ್ಷಕ್ಕೆ ಕಡ್ಡಾಯವಾಗಿ ಮುಂದೂಡಬೇಕು. ಇದಕ್ಕಾಗಿ ಅಂತರ ಚುಚ್ಚುಮದ್ದು, ಕಾಪರ-ಟಿ, ನೀರೊಧ್ ಬಳಸಬೇಕು ಎಂದರು.
ರಕ್ತಹೀನತೆ ತಡೆಗಟ್ಟಲು ಎಲ್ಲಾ ಗರ್ಭಿಣಿ ತಾಯಂದಿರು ಕಬ್ಬಿಣಾಂಶ ಮಾತ್ರೆ ಜೊತೆಗೆ ಪೌಷ್ಟಿಕ ಆಹಾರ ಸೇವನೆ ಮಾಡಬೇಕು. 6 ತಿಂಗಳ ನಂತರ ಮಕ್ಕಳ ಪೂರಕ ಪೌಷ್ಟಿಕ ಆಹಾರ ನೀಡಬೇಕು ಎಂದು ಮಹಿಳೆಯರಿಗೆ ತಿಳಿಸಿದರು.
ಮುಖ್ಯವಾಗಿ ತೊಡಕಿನ ಗರ್ಭಿಣಿಯರ ಬಗ್ಗೆ ಕಾಳಜಿ ಇರಲಿ, ನಿಯಮಿತ ಆರೋಗ್ಯ ತಪಾಸಣೆ ಹಾಗು ಉತ್ತಮ ಹೆರಿಗೆ ಆಗುವಂತೆ ನೋಡಿಕೊಳ್ಳಬೇಕು. ತೊಡಕಿನ ಗರ್ಭಿಣಿಯರನ್ನು ಮುಂಚೂಣಿಯಾಗಿ ಮಾಹಿತಿ ನೀಡಿ ಹೆರಿಗೆಗಾಗಿ ಜಿಲ್ಲಾ ಆಸ್ಪತ್ರೆಗೆ ಶಿಫಾರಸ್ಸು ಮಾಡಬೇಕು ಎಂದು ವೈದ್ಯರಿಗೆ ಸೂಕ್ತ ಸಲಹೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಆಡಳಿತ ವೈದ್ಯಾಧಿಕಾರಿ ಟಿ.ರಾಮಕೃಷ್ಣ, ಪ್ರಸೂತಿ ತಜ್ಞರಾದ ಡಾ.ಶಾರದ, ಡಾ.ಅರುಣ್ ಕುಮಾರ್, ಪ್ರಭಾರಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮಹಮ್ಮದ್ ಖಾಸೀಂ ಸೇರಿದಂತೆ
WhatsApp Group Join Now
Telegram Group Join Now
Share This Article