ಆಸ್ಪತ್ರೆಯಲ್ಲಿ ಸಾವು ಪ್ರತಿ ವರ್ಷ ಇದ್ದಿದ್ದೇ: ದಿನೇಶ್ ಗುಂಡೂರಾವ್

Ravi Talawar
ಆಸ್ಪತ್ರೆಯಲ್ಲಿ ಸಾವು ಪ್ರತಿ ವರ್ಷ ಇದ್ದಿದ್ದೇ: ದಿನೇಶ್ ಗುಂಡೂರಾವ್
WhatsApp Group Join Now
Telegram Group Join Now

ಬೆಳಗಾವಿ, ಡಿಸೆಂಬರ್ 9: ಬಾಣಂತಿಯರ ಮರಣಗಳು ಆಗುತ್ತಿವೆ, ಪ್ರತಿ ವರ್ಷ ಆಸ್ಪತ್ರೆಯಲ್ಲಿ ಸಾವಿನ ಸಂಖ್ಯೆ ಇದ್ದೇ ಇರುತ್ತದೆ. ಅದನ್ನೆ ಮುಂದಿಟ್ಟುಕೊಂಡು ರಾಜಕೀಯ ಉದ್ದೇಶದಿಂದ ಮಾತನಾಡಬಾರದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸುವುದಕ್ಕೂ ಮುನ್ನ ಮಾತನಾಡಿದ ಅವರು, ಬಾಣಂತಿಯರ ಸಾವಿನ ವಿಚಾರವಾಗಿ ಅಧಿವೇಶನದಲ್ಲಿ ಗಂಭೀರವಾಗಿ ಚರ್ಚೆ ಆಗಬೇಕು. ಅದಕ್ಕೆ ನಾವು ಉತ್ತರ ನೀಡುತ್ತೇವೆ ಎಂದರು.

ವ್ಯವಸ್ಥೆಗಳನ್ನು ಸರಿಪಡಿಸುವ ಕೆಲಸ ಸಾಕಷ್ಟು ಆಗುತ್ತಿದೆ. ಬಾಣಂತಿಯರ ಮರಣಗಳ ಬಗ್ಗೆ ಬೆಳಗಾವಿ ಅಧಿವೇಶನಲ್ಲಿ ಉತ್ತರ ಕೊಡಲಾಗುವುದು. ಸರ್ಕಾರ ಮೇಡಿಕಲ್ ಮಾಫಿಯಾ ಹಿಡಿತಕ್ಕೆ ಸಿಲುಕಿದೆಯಾ ಎಂಬ ವಿಚಾರವಾಗಿ ಸದನದಲ್ಲಿ ನಾನು ಚರ್ಚೆ ಮಾಡುತ್ತೇನೆ ಎಂದರು. ಆರೋಗ್ಯ ಇಲಾಖೆ ಬಗ್ಗೆ ಮಾತನಾಡಬೇಕು. ಬಳ್ಳಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಮರಣದ ವಿಚಾರವಾಗಿ ನಮಗೆ ಬಹಳ ಚಿಂತೆ ಇದೆ. ಸರ್ಕಾರವೂ ಎಚ್ಚೆತ್ತುಕೊಂಡಿದೆ ಎಂದರು.

WhatsApp Group Join Now
Telegram Group Join Now
Share This Article